ಕೊಳ್ಳೇಗಾಲ: ಮಾರ್ಚ್ ತಿಂಗಳ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿರುವ ಕೊಳ್ಳೇಗಾಲ ಸೆಸ್ಕಾಂ ಎಇಇ ಎಂ.ರಾಜು ಅವರನ್ನು ಕೊಳ್ಳೇಗಾಲ ತಾಲ್ಲೂಕು ಗ್ಯಾರೆಂಜಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು.
ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಗ್ಯಾರೆಂಟಿ ಯೋಜನೆಗಳ ಪರಿಶೀಲನೆ ಸಭೆಯ ನಂತರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಅವರು ಸೆಸ್ಕಾಂ ಎಇಇ ಎಂ.ರಾಜು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ಅವರು, ನಿಮ್ಮ ಸೇವೆ ಮತ್ರು ಕರ್ತವ್ಯ ಉತ್ತಮವಾಗಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಸಂಧರ್ಭದಲ್ಲಿ ವಿದ್ಯುತ್ ದೀಪಾಲಂಕಾರ ಸೇರಿದಂತೆ ಕಾರ್ಯಕ್ರಮಗಳಲ್ಲಿ ನಿಮ್ಮ ಕರ್ತವ್ಯ ಶ್ಲಾಘನೀಯ ಎಂದು ಪ್ರಶಂಸೆಯನ್ನು ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿದ ಎಇಇ ಎಂ.ರಾಜು ಅವರು ಮಾತನಾಡಿ, ಈ ದಿನ ನನಗೆ ಗೌರವ ಸನ್ಮಾನ ನೀಡಿದ್ದು ನನಗೆ ಸಂತೋಷವಾಗಿದೆ. ಸೇವೆ ಅವಧಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿದ ತೃಪ್ತಿ ಸಹ ನನಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸಗಳಿಗೆ ನಾನು ಸದಾ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಜೇಂದ್ರ ಮತ್ತು ಸದಸ್ಯರಾದ ರಾಜೇಗೌಡ, ಹರ್ಷ,ಮತ್ತು ಸಮಿತಿಯ ಎಲ್ಲಾ ಸದಸ್ಯರು ಇದ್ದರು.
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.