ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು.

ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು ನಡೆದ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಮಹಿಳಾ ಸಬಲೀಕರಣದಿಂದ ಕುಟುಂಬದ ಸರ್ವತೋಮುಖ ಅಭಿವೃದ್ಧಿ ಸಾದ್ಯ ಎಂದರು.
ಸಿದ್ದರಾಮಯ್ಯ ಅವರ ಗ್ಯಾರೆಂಟಿ ಯೋಜನೆಗಳು ಮಹಿಳೆಯರ ಕುಟುಂಬ ನಿರ್ವಹಣೆಗೆ ಮತ್ತಷ್ಟು ಅನುಕೂಲ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿರುವ ಮಹಿಳೆಯರಿಗೆ ಹಾಗೂ ಗ್ಯಾರಂಟಿ ಅನುಷ್ಅನ ಸಮಿತಿಸನ್ಮಾನಿಸಿ ಅಭಿನಂದಿಸಿ ಗೌರವಿಸಿದರು.

ಹಾಗೂ ಸೆಸ್ಕಾಂ ಎಇಇ ಎಂ ರಾಜು ಮತ್ತು ಅವರ ಶ್ರೀಮತಿ ದೀಪರಾಜು ಅವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಜಿಲ್ಲಾ ಉಪಾಧ್ಯಕ್ಷ ಬಸ್ತೀಪುರ ರವಿ, ಸದಸ್ಯರು ಗ್ರೇಡ್ 2 ತಹಶಿಲ್ದಾರ್ ಕುಮಾರ್, ತಾ.ಪಂ ಸಹಾಯಕ ನಿರ್ದೇಶಕರು ಗೋಪಾಲಕೃಷ್ಣ, ಬಿಇಒ ಮಂಜುಳಾ, ಸಿಡಿಪಿಒ ಅಂಬಿಕಾ, ಉಪವಿಭಾಗ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಲೋಕೇಶ್ವರಿ, ಆಹಾರ ಇಲಾಖೆಯ ಶಿರೆಸ್ತದಾರ್ ವಿಶ್ವನಾಥ್, ಪುಢ್ ಇನ್ಸಪೆಕ್ಟರ್ ಪ್ರಸಾದ್, ಸೆಸ್ಕ್ ಎಇಇ ರಾಜು, ಮುಖಂಡ ತೋಟೇಶ್ ಹಾಗೂ ಇತರರು ಇದ್ದರು.

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.