ಕೊಳ್ಳೇಗಾಲ.ಕಡೇ ಕಾರ್ತಿಕ ಮಾಸದ ಅಂಗವಾಗಿ ಇಲ್ಲಿನ ಶ್ರೀಕ್ಷೇತ್ರ ಜೈನ ಬಸದಿ ದಾಸೋಹ ಸಂಸ್ಥಾನ ಮಠ ದಕ್ಷಿಣ ಕಾಶಿ, ಶ್ರೀ.ಶನೇಶ್ವರಸ್ವಾಮಿ ದೇವಸ್ಥಾನಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪಟ್ಟಣದ ಬಸ್ತೀಪುರ ಬಡಾವಣೆಯ ಹೊರವಲಯದಲ್ಲಿರುವ ದೇವಸ್ಥಾನಕ್ಕೆ ಆಗಮಿಸಿದ್ದ ಶಾಸಕರು ಶನೇಶ್ವರಸ್ವಾಮಿಗೆ ನಮಿಸಿ, ಪೂಜೆ ಸಲ್ಲಿಸಿದರು.
ಈ ವೇಳೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಹಾಗೂ ಚಾ.ನಗರ ಉಸ್ತುವಾರಿ ಜೆ.ಸಿ.ಕಿರಣ್ ರವರಿಗೆ ದೇವಸ್ಥಾನದ ಪ್ರಧಾನ ಅರ್ಚಕರು ಮಹಾದೇವಪ್ಪ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಪ್ರಧಾನ ಕಾರ್ಯದರ್ಶಿ ಬಸ್ತೀಪುರ ರವಿ, ಯಳಂದೂರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಪ್ರಭುಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷರು ಶಾಂತರಾಜು, ನಾಮನಿರ್ದೇಶಿತ ಸದಸ್ಯರು ಸ್ವಾಮಿನಂಜಪ್ಪ, ದೇವಸ್ಥಾನದ ಕಾರ್ಯಾಧ್ಯಕ್ಷರು ಚೇತನ್, ಹರೀಶ್, ಬಸ್ತೀಪುರ ಬಡಾವಣೆಯ ಯಜಮಾನರುಗಳು, ಮುಖಂಡರ ಉಪಸ್ಥಿತರಿದ್ದರು.
ವರದಿ : ನಿಂಪು ಬ್ರದರ್ಸ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.