ಕೊಳ್ಳೇಗಾಲ. ಪಟ್ಟಣದ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಯುವ ಸೌರಭ-2025 ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು.
ಜಿಲ್ಲಾಡಳಿತ, ಜಿ.ಪಂ ಚಾ.ನಗರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯ ಚಟುವಟಿಕೆ ಜೊತೆಗೆ ಕಲೆ, ಕ್ರೀಡೆ ಮತ್ತು ಸಂಸ್ಕೃತಿ ಕಡೆಗೆ ಹೆಚ್ಚು ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇಲ್ಲಿನ ಎಸ್.ವಿ.ಕೆ ಶಾಲೆಯ ಜೊತೆಗೆ ಕೆಪಿಎಸ್ ಶಾಲೆಯನ್ನು ಮಂಜೂರು ಮಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಕ್ಷೇತ್ರದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಎಸ್.ವಿ.ಕೆ ಕಾಲೇಜು ಪ್ರಾಂಶುಪಾಲರು ಡಾ.ಮಂಗಳಮೂರ್ತಿ, ಉಪಪ್ರಾಂಶುಪಾಲರು ವಿಶ್ವನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಲೆಗ್ಸಾಂಡರ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಹರ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಬಿ.ಎಸ್.ರಾಜು, ತೋಟೇಶ್ ಹಾಗೂ ಇತರರು ಇದ್ದರು.
ವರದಿ: ನಿಂಪು ಬ್ರದರ್ಸ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.