
ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಸಾಧನಗಳನ್ನು ಬಳಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದು ಕೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು….
ಹನೂರು ಪಟ್ಟಣದ ಚೆಸ್ಕಾಂ ಲೈನ್ ಮ್ಯಾನ್ ರಾಹುಲ್ ಕೂಡ್ಲೂರು ಗ್ರಾಮದ ಬಳಿ ವಿದ್ಯುತ್ ಲೈನ್ ದುರಸ್ತಿ ವೇಳೆ ಸಿಡಿಲಿನಿಂದ ಅವಗಡ ಸಂಭವಿಸಿ ಮೃತಪಟ್ಟ ಹಿನ್ನೆಲೆ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಕುಟುಂಬದವರಿಗೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು..
ಪಟ್ಟಣದ ಲೈನ್ ಮೆಲ್ ರಾಹುಲ್ ಮನೆಗೆ ಭೇಟಿ ನೀಡಿ ಸ್ಥಳದಲ್ಲಿದ್ದ ಎ ಇ ಇ ರಂಗಸ್ವಾಮಿ ಅವರಿಂದ ಶಾಸಕ ಎಂಆರ್ ಮಂಜುನಾಥ್ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ ನೊಂದ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಜೊತೆಗೆ ಅನುಕಂಪದ ಆಧಾರದ ಮೇಲೆ ಕುಟುಂಬದವರಿಗೆ ಕಚೇರಿಯಲ್ಲಿ ಕೆಲಸ ಮಾಡಲು ರಾಹುಲ್ ಪತ್ನಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಿ ಎಂದು ತಿಳಿಸಿದರು..
ಇಂತಹ ಘಟನೆಗೆ ಅವಕಾಶ ನೀಡಬೇಡಿ : ವಿದ್ಯುತ್ ಲೈನ್ ಗಳನ್ನು ದುರಸ್ತಿಪಡಿಸುವ ವೇಳೆ ಲೈಮ್ ಮೆನ್ ಗಳು ಸೂಕ್ತ ಸುರಕ್ಷತಾ ಸಾಧನೆಗಳನ್ನು ಬಳಸಿ ಕೆಲಸ ನಿರ್ವಹಿಸಬೇಕು ಜೊತೆಗೆ ಇಂತಹ ಘಟನೆಗಳು ಜರುಗದಂತೆ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳೇ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಚೆಸ್ಕಾಂ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು..
ವರದಿ: ನಿಂಪು ರಾಜೇಶ್