

ಕೊಳ್ಳೇಗಾಲ. ತಾಲ್ಲೂಕಿನ ಹರಳೆ ಗ್ರಾಮದಲ್ಲಿ ಇಂದು ದೊರೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಚಾ.ನಗರ ಸಂಸದರು ಸುನೀಲ್ ಬೋಸ್ ರವರ ಹುಟ್ಟುಹಬ್ಬದ ಅಂಗವಾಗಿ ಪುಸ್ತಕ ಸಾಮಾಗ್ರಿಗಳನ್ನು ವಿತರಣೆ ಮಾಡಿದರು.
ಹರಳೆ ಗ್ರಾಮದ ಸರ್ಕಾರಿ ಶಾಲೆಯ 76 ಮಕ್ಕಳಿಗೆ ಪುಸ್ತಕ ಮತ್ತು ಸಾಮಾಗ್ರಿಗಳನ್ನು ವಿತರಿಸಿದರು. ಬಳಿಕ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಟ್ರಸ್ಟ್ ಅಧ್ಯಕ್ಷರು ಚೇತನ್ ದೊರೆ ಮಾತನಾಡಿ, ಇಂದು ನಮ್ಮ ನೆಚ್ಚಿನ ಸಂಸದರು ಸುನೀಲ್ ಬೋಸ್ ರವರ ಹುಟ್ಟುಹಬ್ಬದ ಅಂಗವಾಗಿ ದೊರೆ ಬೆಳಕು ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕವನ್ನು ವಿತರಣೆ ಮಾಡಲಾಗಿದೆ ಎಂದರು.
ಚಾ.ನಗರ ಜಿಲ್ಲೆಗೆ ಹೆಚ್ಚು ಒತ್ತು ನೀಡಿ ಶೈಕ್ಷಣಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಹಲವಾರು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಪೀಠೋಪಕರಣ ಗಳನ್ನು ಕೊಡುವಂತಹ ಕೆಲಸವನ್ನು ನಮ್ಮ ಟ್ರಸ್ಟ್ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಯುವ ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಅಜಯ್, ಸಂಜಯ್, ಗ್ರಾಮದ ಮುಖಂಡರು ನಾಗರಾಜು, ಶಾಲೆಯ ಮುಖ್ಯ ಶಿಕ್ಷಕ ಸಿದ್ದರಾಜು, ಸಿ.ಆರ್.ಪಿ ಭಾಸ್ಕರ್, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಶಿವಣ್ಣ ಹಾಗೂ ಶಿಕ್ಷಕರು, ಮಕ್ಕಳು ಇದ್ದರು.