

.ಕೊಳ್ಳೇಗಾಲ
ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕ್ಯಾಥೊಲಿಕ್ ಅಸೋಸಿಯೇಷನ್ ಆಫ್ ಚಾ.ನಗರ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಪಟ್ಟಣದ ಸಂತ ಫ್ರಾನ್ಸಿಸ್ ಅಸ್ಸಿಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಳ್ಳೇಗಾಲ ಪಟ್ಟಣದ ಸಂತ ಫ್ರಾನ್ಸಿಸ್ ಅಸ್ಸಿಸಿ ಚರ್ಚ್ ಫಾದರ್ ಎಂ.ರಾಯಪ್ಪ ಅವರು ಉದ್ಘಾಟಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಮೈಸೂರು ರಾಜೇಂದ್ರ ನಗರ ಶ್ರೀ ಛಾಯದೇವಿ ಕಾಲೇಜು ಆಫ್ ಎಜುಕೇಷನ್ ಪ್ರೋ.ಡಾ.ಅಂತೋಣಿ ಪೌಲ್ ರಾಜ್.ಸಿ ಅವರು ಶೈಕ್ಷಣಿಕ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪ್ರೋ.ಡಾ.ಅಂತೋಣಿ ಪೌಲ್ ರಾಜ್.ಸಿ ರವರು ಮಾತನಾಡಿ
ಕ್ಯಾಥೊಲಿಕ್ ಅಸೋಸಿಯೇಷನ್ ಆಫ್ ಚಾ.ನಗರ ವತಿಯಿಂದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದೀಶದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ
ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಸನ್ಮಾನಿಸಿ ಅವರನ್ನು ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಮುಂದಿನ ದಿನಗಳಲ್ಲಿಯೂ ಕೂಡ ಉತ್ತಮ ಅಂಕಗಳನ್ನು ಪಡೆಯುವಂತೆ ಪ್ರೋತ್ಸಾಹಿಸಲಾಗಿದೆ, ಹಾಗೂ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾ ದಾನ ಮಾಡಿ ತಮ್ಮ ವೃತ್ತಿಯಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ಕೊಡುಗೆ ಕೊಟ್ಟು ವೃತ್ತಿಯಿಂದ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗೌರವಿಸಿ ಸನ್ಮಾನಿಸಲಾಗಿದೆ
ಪುರಸ್ಕಾರವನ್ನು ಪಡೆದ ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಿ ಚನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆದು ತಮ್ಮ ಜೀವನ ಉಜ್ವಲಗೊಳಿಸಿಕೊಳ್ಳಬೇಕು ನಮ್ಮಿಂದ ಆಗಲ್ಲ ಎಂದು ಕೊಂಡರೆ ಏನು ಮಾಡಲು ಆಗುವುದಿಲ್ಲ, ನನ್ನಿಂದ ಸಾಧ್ಯ ನಾನು ಓದಿ ಉತ್ತಮ ಅಂಕ ಪಡೆದು ಸಾಧಿಸುತ್ತೇನೆ ಎಂದು ಛಲ ಹಿಡಿದರೆ ಖಂಡಿತ ಎಲ್ಲವು ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕು ಎಂದರು,
ಕಾರ್ಯಕ್ರಮದಲ್ಲಿ ಮಾರ್ಟಳ್ಳಿ ಸಂತ ಲೂರ್ಧು ಮಾತೆ ಚರ್ಚ್ ಫಾದರ್ ಎಂ.ವಿನ್ಸೆಂಟ್, ಚಾ.ನಗರ ಸಂತಪೌಲರ ಚರ್ಚ್ ಫಾದರ್ ಸಿ.ಅಂತೋಣಪ್ಪ, ಜಿಲ್ಲಾ ಕ್ಯಾಥೊಲಿಕ್ ಅಸೋಸಿಯೇಷನ್ ಅಧ್ಯಕ್ಷ ಡೇವಿಡ್.ಡಿ.ಜಿ, ಅಖಿಲ ಭಾರತ ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷರು ಆಲ್ವಿನ್ ಡಿಸೋಜ, ಮೈಸೂರಿನ ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲಾ ಸಂಘಸಂಸ್ಥೆಗಳ ಒಕ್ಕೂಟ ಅಧ್ಯಕ್ಷರು ಗ್ರೇಷಿಯನ್ ರಾಡ್ರಿಗಸ್, ಚಾ.ನಗರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಾಶ್.ಬಿ.ಎಂ, ಬೆಂಗಳೂರು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ನಿರ್ದೇಶಕರು ಸಂದೀಪ್.ಕೆ.ಸಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಜೋಸೆಫ್ ಅಲೆಕ್ಸಾಂಡರ್, ಹಾಗೂ ಇನ್ನಿತರರು ಇದ್ದರು