
ನಿಧನ
ಕೊಳ್ಳೇಗಾಲ, ತಾಲ್ಲೂಕಿನ ಹಳೇ ಹಂಪಾಪುರ ಗ್ರಾಮದ ನಂಜುಂಡಸ್ವಾಮಿ (62) ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.
ರಾತ್ರಿ ಮನೆಯಲ್ಲಿ ಮಲಗಿದ್ದಾಗ ತಡರಾತ್ರಿ 2.:30 ರ ಸಮಯದಲ್ಲಿ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಚಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಮೃತರು ಸಹೋದರ ಮಾಜಿ ತಾ.ಪಂ ಉಪಾಧ್ಯಕ್ಷ ಹಂಪಾಪುರ ಬಿ.ಬಸವಣ್ಣ, ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಮಾಜಿ ಶಾಸಕ ಎನ್. ಮಹೇಶ್, ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಎಸ್. ರಮೇಶ್ ಹಾಗೂ ಇನ್ನಿತರ ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
ಮೃತರ ಅಂತ್ಯಕ್ರಿಯೆ ಇಂದು ಗುರುವಾರ ಅವರ ಸ್ವಗ್ರಾಮ ಹಳೇ ಹಂಪಾಪುರ ಗ್ರಾಮದಲ್ಲಿರುವ ಅವರ ಜಮೀನಿನಲ್ಲಿ ನಡೆಯಿತು.