
ಹೆದ್ದಾರಿಯಲ್ಲಿ ಅಪಘಾತ ತಡೆಗಟ್ಟಲು ಸೂಕ್ತ ಕ್ರಮ – ಶಾಸಕ ಎಂ. ಆರ್. ಮಂಜುನಾಥ್
ಕೊಳ್ಳೇಗಾಲ: ತಾಲೂಕಿನ ನರೀಪುರ -ಸತ್ತೇಗಾಲ ಗ್ರಾಮಗಳ ಬಳಿಯ ರಾಷ್ಟ್ರೀಯ ಹೆದ್ದಾರಿ 948 ರಲ್ಲಿ ಅಪಘಾತಗಳು ದಿನೇ ದಿನೇ ಹೆಚ್ಚಿತ್ತಿದ್ದು, ಇದನ್ನು ತಡೆಗಟ್ಟಲು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು.
ತಾಲೂಕಿನ ನರೀಪುರ ಗ್ರಾಮದಿಂದ ಸತ್ತೇಗಾಲ ಬೈಪಾಸ್ ರಸ್ತೆ ವರೆಗೂ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹನೂರು ಶಾಸಕ ಆರ್ ಮಂಜುನಾಥ್ ಮತ್ತು ಜಿಲ್ಲಾಧಿಕಾರಿ ಶಿಲ್ಪಾನಾಗ್ ನರಿಪುರ ಸರ್ಕಲ್ ಮತ್ತು ಸತ್ತೇಗಾಲ ಬೈಪಾಸ್ ಸರ್ಕಲ್ ಗಳಲ್ಲಿ ಅಪಘಾತಗಳು ಜರುಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅಲ್ಲಿನ ಗ್ರಾಮಸ್ಥರು ಮತ್ತು ರೈತ ಮುಖಂಡರುಗಳ ಮನವಿಯಂತೆ ಹೆದ್ದಾರಿಗಳಲ್ಲಿ ವಿದ್ಯುತ್ ಲೈಟ್ ಗಳು, ಅಪಘಾತಗಳು ಜರುಗುವ ಸ್ಥಳಗಳಲ್ಲಿ ರಸ್ತೆ ದುಡ್ಡುಗಳನ್ನು ನಿರ್ಮಿಸಿ ಕೊಡಲಾಗುವುದು ಮತ್ತು ಈ ಮಾರ್ಗವಾಗಿ ಸ್ಥಳೀಯರ ರಸ್ತೆ ಸಂಚಾರಕ್ಕೆ ಅವಕಾಶವಾಗಲೆಂದು ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು ಹಾಗೂ ಸತ್ತೇಗಾಲ ಬೈಪಾಸ್ ಸೇತುವೆಯಿಂದ ಅಂಡರ್ ಪಾಸ್ ರಸ್ತೆ ನಿರ್ಮಿಸಿ ಉಗನಿಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಂಡರ್ ಪಾಸ್ ಸೇತುವೆ ನಿರ್ಮಾಣ ಮಾಡಲಾಗುವುದು. ಮತ್ತು ಹೆದ್ದಾರಿ ಉದ್ದಕ್ಕೂ, ಲೈಟ್ಗಳನ್ನು ಅಳವಡಿಸಲು ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ಮತ್ತು ಜಿಲ್ಲಾಧಿಕಾರಿ ಶಿಲ್ಪಾನಾಥ್ ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ದಿಲೀಪ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಎನ್.ಹೆಚ್ ಚಾರುಲತಾ ಜೈನ್, ವಿಶ್ವ ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಸೆಸ್ಕ್ ಎಇಇ ರಾಜು, ಸತ್ಯಗಾಲ ಗ್ರಾಮಸ್ಥರು ಮತ್ತು ರೈತ ಮುಖಂಡರು ಉಪಸ್ಥಿತರಿದ್ದರು.
ವರದಿ: ನಿಂಪು ಬ್ರದರ್ಸ್
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)













