
ಕೊಳ್ಳೇಗಾಲ- ಚಾಕುವಿನಿಂದ ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಕಾಂಗ್ರೆಸ್ ಯುವ ಮುಖಂಡ ಸುನೀಲ್ ಅವರನ್ನು ಇಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ತಾಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಮಂಗಳವಾರ ರಾಜಣ್ಣ ಎಂಬಾತ ಕಾಂಗ್ರೆಸ್ ಯುವ ಮುಖಂಡ ಸುನೀಲ್ ಮೇಲೆ ಚಾಕುವಿನಿಂದ ದಾಳಿ ಮಾಡಿ ಭುಜಕ್ಕೆ ಇರಿದಿದ್ದ. ತೀವ್ರ ರಕ್ತಸ್ರಾವ ದಿಂದ ಅಸ್ವಸ್ಥಗೊಂಡಿದ್ದ ಸುನೀಲ್ ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಈ ಘಟನೆ ಬಗ್ಗೆ ಮಾಂಬಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಆರೋಪಿಯನ್ನು ಪೋಲೀಸರು ಇನ್ನೂ ಬಂಧಿಸಿಲ್ಲ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಯುವ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ ಆಗಿರುವ ವಿಷಯ ತಿಳಿದ ಶಾಸಕ ಎ.ಆರ್. ಕೃಷ್ಣಮೂರ್ತಿ ಇಂದು ಸಾಯಂಕಾಲ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಮತ್ತು ಆರೋಪಿಯನ್ನು ಶೀರ್ಘ ಬಂಧಿಸುವಂತೆ ಪೋಲೀಸರಿಗೆ ತಿಳಿಸುವುದಾಗಿ ಗಾಯಾಳುವಿಗೆ ಹೇಳಿದರು.
ವರದಿ : ನಿಂಪು ಬ್ರದರ್ಸ್
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)













