
ಬೆಂಕಿ ಅನಾಹುತ ನಿರಾಶ್ರಿತರಿಗೆ ಮಳಿಗೆ ನಿರ್ಮಾಣದ ಭರವಸೆ ಶಾಸಕ ಎಆರ್ ಕೃಷ್ಣಮೂರ್ತಿ
ಯಳಂದೂರು ಜ. 12
ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಅಂಗಡಿ ಮಳಿಗೆಗಳಿಗೆ ಆಕಸ್ಮಿಕ ಬೆಂಕಿ ಅನಾಹುತದಿಂದ ಪೆಟ್ಟಿ ಅಂಗಡಿ ಮಳಿಗೆ ಕಳೆದುಕೊಂಡ ನಿರಾಶ್ರಿತರಿಗೆ ದೇವಾಲಯದ ವತಿಯಿಂದ ಅಂಗಡಿ ಮಳಿಗೆ ನಿರ್ಮಿಸಿ ಕೊಡುವುದಾಗಿ ಶಾಸಕ ಎ.ಆರ್. ಕೃಷ್ಣಮೂರ್ತಿ ಭರವಸೆ ನೀಡಿದರು.
ಭಾನುವಾರ ಬಿಳಿಗಿರಂಗನ ಬೆಟ್ಟಕ್ಕೆ ಭೇಟಿ ನೀಡಿದವರು ಅಂಗಡಿ ಮಳಿಗೆಗಳಿಗೆ ಬೆಂಕಿ ಬಿದ್ದಿರುವ ಬಗ್ಗೆ ಪೊಲೀಸ್ ಇಲಾಖೆ ಮತ್ತು ಸ್ಥಳೀಯ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಮಾತನಾಡಿದ ಅವರು, ಒಟ್ಟು 8ಮಂದಿ ಜನರಿಗೆ ಸೇರಿದ ಮಳಿಗೆ ಆಕಸ್ಮಿಕ ಬೆಂಕಿಯಿಂದ ಸುಟ್ಟು ಭಸ್ಮವಾಗಿದ್ದರಿಂದ ಬದುಕು ತುಂಬಾ ಕಷ್ಟಕರವಾಗಿದೆ ಆದ್ದರಿಂದ ಎಲ್ಲರಿಗೂ ಶಾಸಕರು ವೈಯಕ್ತಿಕ ಪರಿಹಾರ ಧನ 5 ಸಾವಿರ ರು ವಿತರಣೆ ಮಾಡಿದರು.
ಸರ್ಕಾರದಿಂದ ಪರಿಹಾರ ಕೊಡಿಸಿ ಕೊಡುವುದರ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗುವುದು ಅಲ್ಲದೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಸಹಾಯ ಧನ ದೊಂದಿಗೆ ಸಾಲ ಸೌಲಭ್ಯ ಕೊಡಿಸಿ ಬದುಕನ್ನು ಕಟ್ಟಿಕೊಡಲಾಗುವುದೆಂದು ಭರವಸೆ ನೀಡಿದರು.
ಬೆಂಕಿ ಅನಾಹುತದಿಂದ ಸುಟ್ಟು ಹೋಗಿರುವ ಜಾಗದಲ್ಲೇ ಸ್ಥಳ ಪರಿಶೀಲನೆ ಮಾಡಿ ಶ್ರೀ
ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯಕ್ಕೆ ಸೇರಿದ ಜಾಗದಲ್ಲಿ ಮಳಿಗೆಗಳನ್ನು ನಿರ್ಮಿಸಿ ಕೊಡುವ ನಿಟ್ಟಿನಲ್ಲಿ ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಜೊತೆ ಚರ್ಚಿಸಿ ಬೆಂಕಿ ಅವಘಡದಿಂದ ಕಳೆದುಕೊಂಡ ನಿರಾಶ್ರಿತರಿಗೆ ಮಳಿಗೆ ನಿರ್ಮಿಸಿ ಬಾಡಿಗೆಗೆ ನೀಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಬಿಳಿಗಿರಿ ರಂಗನಾಥ ಸ್ವಾಮಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೆ ಶ್ರೀನಿವಾಸ್, ಜಿಲ್ಲಾ ಗ್ಯಾರೆಂಟಿ ಯೋಜನೆಯ ಪ್ರಾಧಿಕಾರದ ಅಧ್ಯಕ್ಷ ಹೊಂಗನೂರು ಚಂದ್ರು, ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಕಿನಕನಹಳ್ಳಿ ಪ್ರಭು ಪ್ರಸಾದ್, ಸದಸ್ಯರಾದ ಗುಂಬಳ್ಳಿ ರಾಜಣ್ಣ, ಆರೋಗ್ಯ ಸಮಿತಿ ಸದಸ್ಯ ಅಗ್ರಹಾರ ರೇವಣ್ಣ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಇನ್ನಾಯತ್ ಉಲ್ಲಾ, ಕೃಷ್ಣಮೂರ್ತಿ ಅಭಿಮಾನಿ ಬಳಗದ ಅಧ್ಯಕ್ಷ ಕಂದಳ್ಳಿ ನಂಜುಂಡಸ್ವಾಮಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರದೀಪ್, ಶಾಸಕರ ಕಾರ್ಯದರ್ಶಿ ಚೇತನ್, ಸರ್ಕಲ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ, ಪಿಎಸ್ಐ ಆಕಾಶ್, ಆರ್ ಎಫ್ ಓ ಸತೀಶ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಫೋಟೋ ಇದೆ
ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟದ ಬಸ್ ನಿಲ್ದಾಣದ ಆವರಣದಲ್ಲಿ ಜೀವನೋಪಾಯಕ್ಕೆ ನಿರ್ಮಿಸಿಕೊಂಡಿದ್ದ ಅಂಗಡಿ ಮಡಿಗಳಿಗೆ ಬೆಂಕಿ ಬಿದ್ದು ಸುಟ್ಟುವುದರಿಂದ ಶಾಸಕ ಎ. ಆರ್. ಕೃಷ್ಣಮೂರ್ತಿ ಭೇಟಿ ನೀಡಿ ವೈಯಕ್ತಿಕ ಪರಿಹಾರ ಧನ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
- ನಿಂಪುವಾರ್ತೆ
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)













