/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ
Image

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳು ನವಕರ್ನಾಟಕದ ನಿರ್ಮಾಣಕ್ಕೆ ಸಹಕಾರಿಯಾಗಿವೆ ಎಂದು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ತಿಳಿಸಿದರು.

    ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 3 ದಿನಗಳ ಕಾಲ ಆಯೋಜಿಸಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ರಾಜ್ಯಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ವಸ್ತುಪ್ರದರ್ಶನ ಮಳಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರವು 2013-18ರ ಅವಧಿಯಲ್ಲಿ ಜನತೆಗೆ ಭಾಗ್ಯಗಳ ಭಾಗ್ಯ ನೀಡಿತ್ತು. ಇಡೀ ದೇಶದಲ್ಲಿಯೇ ಭಾಗ್ಯಗಳ ಭಾಗ್ಯ ನೀಡಿದವರು ಎಂದರೇ ಅದು ಸಿದ್ದರಾಮಯ್ಯನವರು ಮಾತ್ರ ಎಂದು ದೇಶವೇ ಕೊಂಡಾಡುತ್ತಿದೆ. ಮುಂದುವರಿದು 2ನೇ ಬಾರಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಭಿವೃದ್ಧಿ ಕೆಲಸ-ಕಾರ್ಯಗಳಿಗೆ ಮುಂದಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನೇಕ ನಿರುದ್ಯೋಗಿ ಯುವಕ, ಯುವತಿಯರಿಗೆ ಸಾಕಷ್ಟು ಅನುಕೂಲಗಳಾಗಿದ್ದು, ಆ ಮೂಲಕ ನವಕರ್ನಾಟಕದ ನಿರ್ಮಾಣಕ್ಕೆ ನಾಂದಿ ಹಾಡಿದ್ದಾರೆ ಎಂದರು. 

  ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ವಾರ್ಷಿಕವಾಗಿ 56 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಜಿ.ಎಸ್.ಟಿ ಕಡಿಮೆಯಾದ ಬಳಿಕ 54 ಸಾವಿರ ಕೋಟಿ ರೂ.ಗಳಿಗೆ ಮಿತಿಗೊಂಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ರಾಜ್ಯಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸಲು ರಾಜ್ಯದ ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ 3 ದಿನಗಳ ಕಾಲ ವಸ್ತುಪ್ರದರ್ಶನ ಮಳಿಗೆ ತೆರೆಯಲಾಗುತ್ತಿದೆ. ಹಾಗೆಯೇ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರವಾಗಿದ್ದು, ಈ ಭಾಗದ ಜನತೆಗೆ ಸರ್ಕಾರದ ಜನಪರ ಕಾರ್ಯಕ್ರಮಗಳ ಮನವರಿಕೆ ಮಾಡಿಕೊಡಲು ಮಳಿಗೆ ತೆರೆಯಲಾಗಿದೆ ಎಂದು ತಿಳಿಸಿದರು.   

ಗ್ಯಾರಂಟಿ ಯೋಜನೆಗಳು ರಾಜ್ಯದ ಸರ್ವಜನರಿಗೂ ಅನುಕೂಲ ಕಲ್ಪಿಸಿವೆ. ಪ್ರತಿ ಕುಟುಂಬಕ್ಕೆ ಪ್ರತಿತಿಂಗಳು ಅಂದಾಜು ತಲಾ 5 ಸಾವಿರ ರೂ. ದೊರೆಯುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಬಂಗಾರವಾಗಿದೆ. ಸಾಮಾನ್ಯ ಜನರು ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸಲು ಬಸ್ ನಿಲ್ದಾಣಕ್ಕೆ ಬರುವುದರಿಂದ ಇಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಳಿಗೆ ತೆರೆದು ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಶಾಸಕರು ಹೇಳಿದರು.

ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಅಭಿವೃದ್ಧಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದಕ್ಕಾಗಿ ಸರ್ಕಾರವು ಹೆಚ್ಚಿನ ಅನುದಾನವನ್ನು ಸದ್ವಿನಿಯೋಗ ಮಾಡುತ್ತಿದೆ ಎಂದು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ತಿಳಿಸಿದರು.

  ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಮಾತನಾಡಿ ರಾಜ್ಯಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಬಡವರು ಹಾಗೂ ಮಹಿಳೆಯರು ಆರ್ಥಿಕವಾಗಿ ಸದೃಢಗೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಯೋಜನೆಗಳು ನೆರವಾಗಿವೆ. ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದು, ಚಾಮರಾಜನಗರ ಜಿಲ್ಲೆ ಗ್ಯಾರಂಟಿ ಯೋಜನೆಗಳ ಪ್ರಗತಿಯಲ್ಲಿ ಮುಂಚೂಣಿಯಲ್ಲಿದೆ ಎಂದರು.

  ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ರಾಜ್ಯಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ವಸ್ತುಪ್ರದರ್ಶನ ಮಳಿಗೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. 

  ಕೊಳ್ಳೇಗಾಲ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜೇಂದ್ರ, ಉಪಾಧ್ಯಕ್ಷರಾದ ರವಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾದ ಉಮಾಪತಿ, ಯಳಂದೂರು ತಾಲೂಕು ಅಧ್ಯಕ್ಷರಾದ ಪ್ರಭುಪ್ರಸಾದ್, ತಾಲೂಕು ಸಮಿತಿ ಸದಸ್ಯರಾದ ಶಿವಕುಮಾರ್, ಪರಮೇಶ್ವರ, ರಾಜೇಗೌಡ, ಸಹನಾ ಪ್ರಿಯಾ, ಕೃಷ್ಣವೇಣಿ, ಮಾಜ್, ಸಿಕ್ಮತ್ ಬಾಬು, ನಗರಸಭೆ ಪೌರಾಯುಕ್ತರಾದ ರುದ್ರಮ್ಮ ಶರಣಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ, ವಾರ್ತಾ ಸಹಾಯಕರಾದ ಸುರೇಶ್‍ಕುಮಾರ್, ಯಳಂದೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಲ್. ರಾಮಚಂದ್ರ, ಪಿ.ಎ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಮಂಜುನಾಥ್, ಇತರರು ಇದ್ದರು.

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಬಿಳಿಗಿರಿರಂಗನ ಬೆಟ್ಟ: ಅಗ್ನಿ ದುರಂತದಲ್ಲಿ ಅಂಗಡಿ ಕಳೆದು ಕೊಂಡವರಿಗೆ ಹೊಸದಾಗಿ ಅಂಗಡಿ ನಿರ್ಮಾಣ

ಬೆಂಕಿ ಅನಾಹುತ ನಿರಾಶ್ರಿತರಿಗೆ ಮಳಿಗೆ ನಿರ್ಮಾಣದ ಭರವಸೆ ಶಾಸಕ ಎಆರ್ ಕೃಷ್ಣಮೂರ್ತಿ ಯಳಂದೂರು ಜ. 12ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಅಂಗಡಿ ಮಳಿಗೆಗಳಿಗೆ…

ByByN Rajesh Jan 13, 2026

ಕೊಳ್ಳೇಗಾಲದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ

ವರದಿ – ಎನ್. ಸುರೇಶ್ ಕೊಳ್ಳೇಗಾಲ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಇಪಿ ಮತ್ತು ಟಿಎಸ್ಪಿ ಯೋಜನೆಯಡಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ…

ByByN Rajesh Jan 13, 2026

ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿ ಗ್ರಾಮದಲ್ಲಿ ರೈತ ಸಂಘದ ಶಾಖೆ ಉದ್ಘಾಟನೆ

ಕೊಳ್ಳೇಗಾಲ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದಲ್ಲಿ ರೈತ ಸಂಘದ ಗ್ರಾಮಶಾಖೆಯನ್ನು ಉದ್ಘಾಟನೆಗೊಳಿಸಿ, ನೂತನವಾಗಿ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರ್ಪಡೆ ಮಾಡಿಕೊಳ್ಳಲಾಯಿತು.ಬಳಿಕ ರೈತ ಮುಖಂಡ ಶೈಲೇಂದ್ರ…

ByByN Rajesh Jan 6, 2026

ಹನೂರು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ – ಶಾಸಕ ಎಂ.ಆರ್. ಮಂಜುನಾಥ್

ಕ್ಷೇತ್ರದ ಜನತೆಯ ಋಣ ತೀರಿಸಲು ನೀಡಿರುವ ಒಂದು ಅವಕಾಶವನ್ನು ಬಳಸಿಕೊಂಡು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂಆರ್ ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು……

ByByN Rajesh Jan 5, 2026

ಕೊಳ್ಳೇಗಾಲ : ಅಗಲಿದ ಛಾಯಾಗ್ರಾಹಕ ಹಬೀಬ್ ಗೆ ಶ್ರದ್ಧಾಂಜಲಿ

ಕೊಳ್ಳೇಗಾಲ. ತಾಲ್ಲೂಕು ಛಾಯಚಿತ್ರಗ್ರಾಹಕರ ಸಂಘದಿಂದ ಇತ್ತೀಚೆಗೆ ಹಿರಿಯ ಛಾಯಾಗ್ರಾಹಕ ಹಬೀಬ್ ಉಲ್ಲಾ ನಿಧನರಾದ ಹಿನ್ನೆಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಬೀಬ್…

ByByN Rajesh Jan 3, 2026

ಕೊಳ್ಳೇಗಾಲ: ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕೊಳ್ಳೇಗಾಲ. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಿಕ್ಕಮಾಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ನಟರಾಜು ಹಾಗೂ ಪದಾಧಿಕಾರಿಗಳು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ…

ByByN Rajesh Dec 24, 2025

Leave a Reply

Your email address will not be published. Required fields are marked *

Scroll to Top