ಕೊಳ್ಳೇಗಾಲ - ಕಳೆದು ಮೂರು ವರ್ಷಗಳಿಂದ ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯಲ್ಲಿ ನನ್ನ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಗಮನಿಸಿ ನನಗೆ ಮತ್ತೊಮ್ಮೆ ನಿಮ್ಮ ಸೇವೆ ಮಾಡಲು ಅವಕಾಶ ನೀಡಬೇಕೆಂದು ಶಾಸಕ ಎ ಆರ್ ಕೃಷ್ಣಮೂರ್ತಿ ಮನವಿ ಮಾಡಿಕೊಂಡರು
ಸೋಮವಾರ ಕೊಳ್ಳೇಗಾಲ ತಾಲೂಕಿನ ಚಿಲಕವಾಡಿ ಗ್ರಾಮದಲ್ಲಿ ಸೆಸ್ಕಾಂ ಸೆಕ್ಷನ್ ಕಚೇರಿ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು
ನಾನು ಶಾಸಕನಾಗಿ ಆಯ್ಕೆಯಾದ ನಂತರ ಈ ಮೂರು ವರ್ಷಗಳಲ್ಲಿ ಕೊಳ್ಳೇಗಾಲ ಕ್ಷೇತ್ರದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಿದ್ದೇನೆ ನಿರೀಕ್ಷೆಗೂ ಮೀರಿದ ಅಭಿವೃದ್ಧಿಗೆ ಕೆಲಸ ಕಾರ್ಯಗಳು ನಡೆಯುತ್ತಿದೆ
ವಿವಿಧ ಸಮುದಾಯಗಳ ಸಮುದಾಯ ಭವನಗಳಿಗೆ ಅನುದಾನ ನೀಡಲಾಗಿದೆ ಸ್ತ್ರೀಶಕ್ತಿ ಭವನಗಳಿಗೆ ಅನುದಾನ ನೀಡಲಾಗಿದೆ ರಸ್ತೆ ಕಾಮಗಾರಿ ಗಳಿಗೆ ಅನುದಾನ ತರಲಾಗಿದೆ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ ಹೀಗೆ ನೂರಾರು ಕೋಟಿ ಅನುದಾನ ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ತರಲಾಗಿದೆ
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮತದಾರರು ಮತ್ತು ಜನರು ನನ್ನ ಅಭಿವೃದ್ಧಿ ಯೋಜನೆಗಳನ್ನು ಗಮನಿಸಿ ಮತ್ತೊಮ್ಮೆ ನನಗೆ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿ ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಿಕೊಂಡರು
ಮುಂದುವರೆದು ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮತ್ತು ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ದಿನಾಂಕಗಳಿಗಾಗಿ ಕಾಯುತ್ತಿದ್ದು ಅವರ ದಿನಾಂಕ ನಿಗದಿಯಾದ ನಂತರ ಕೊಳ್ಳೇಗಾಲದಲ್ಲಿ ಇನ್ನೂ ನೂರಾರು ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಒಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಭೆಯಲ್ಲಿ ಅವರು ತಿಳಿಸಿದರು
ಇಂದು ನಡೆದ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಸೆಸ್ಕಾಂ ಉಪ ವಿಭಾಗದ ಇಇ ತಬಸಮ್ ಆಫಜ ಮತ್ತು ಎಇಇ ಸುರೇಶ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜೇಂದ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ತೋಟೇಶ್, ಮಾಜಿ ನಗರಸಭಾ ಅಧ್ಯಕ್ಷ ರಮೇಶ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.