ಕೊಳ್ಳೇಗಾಲ ಯುವ ಪ್ರತಿಭೆಗಳು ರಾಜ್ಯಮಟ್ಟದಲ್ಲಿ ಬೆಳಗಲಿ ಶಾಸಕ ಎ ಆರ್
ಕೃಷ್ಣಮೂರ್ತಿ ಆಶಯ
ಕೊಳ್ಳೇಗಾಲ: ಕೊಳ್ಳೇಗಾಲದ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ನೃತ್ಯ ಸಂಗೀತ ಹಾಗೂ ಇನ್ನಿತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರತಿಭೆಗಳು ಬೆಳಗಲಿ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎಆರ್ ಕೃಷ್ಣಮೂರ್ತಿ ತಿಳಿಸಿದರು.
ಕೊಳ್ಳೇಗಾಲ ಪಟ್ಟಣದ ಎಂ ಜಿ ಎಸ ವಿ ಕಾಲೇಜು ಮೈದಾನದಲ್ಲಿ ಭಾನುವಾರ ಮಾರ್ವಲೆಸ್ ಡ್ಯಾನ್ಸ್ ಸ್ಟುಡಿಯೋ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ನೃತ್ಯೂತ್ಸವ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು.
ಕೊಳ್ಳೇಗಾಲದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಆಯೋಜನೆ ಮಾಡಿರುವುದು ನಿಜಕ್ಕೂ ಮೆಚ್ಚುವಂತಹದ್ದು ಮಾರ್ವೆಲೆಸ್ ಡ್ಯಾನ್ಸ್ ಸ್ಟುಡಿಯೋ ಕೊರಿಯಗ್ರಾಫರ್ ಆದ ಶ್ರೀವತ್ಸ ಅವರು ಇಂತಹ ಒಂದು ಅದ್ಭುತ ಕಾರ್ಯಕ್ರಮ ಆಯೋಜನೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಂದುವರಿದು ಮಾತನಾಡಿದ ಅವರು ನಮ್ಮ ಕೊಳ್ಳೇಗಾಲದ ಯುವ ಪ್ರತಿಭೆಗಳು ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸುವ ಮೂಲಕ ಕೊಳ್ಳೇಗಾಲ ತಾಲೂಕುಗಳಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.
ನಾನು ಈ ಕ್ಷೇತ್ರದ ಶಾಸಕನಾಗಿ ನಿಮ್ಮ ಸಹಕಾರಕ್ಕೆ ಸದಾ ಬದ್ಧನಾಗಿರುತ್ತೇನೆಂದು ಅವರು ತಿಳಿಸಿದರು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಸ್ ಬಾಲರಾಜು, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಾತೃ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಓಲೆ ಮಹದೇವ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಿ ಎನ್ ಲೋಕೇಶ್ ಕೊಳ್ಳೇಗಾಲ ಬ್ಲಾಕ್ ಅಧ್ಯಕ್ಷ ತೋಟೇಶ್ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ನಿಂಪು ರಾಜೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಗದೀಶ್ ಶಾಸ್ತ್ರಿ, ಪ್ರಗತಿಪರ ಹೋರಾಟಗಾರ ದಿಲೀಪ್ ಸಿದ್ದಪ್ಪಾಜಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಆಪ್ತ ಸಹಾಯಕ ಗಿರೀಶ್ ಬಾಬು ಸೇರಿದಂತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು ಪ್ರಪ್ರಥಮ ಬಾರಿಗೆ ಕೊಳ್ಳೇಗಾಲದಲ್ಲಿ ಮಾರ್ವೆಲೆಸ್ ಡ್ಯಾನ್ಸ್ ಸ್ಟುಡಿಯೋ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯದ ವಿವಿಧೆಡೆಗಳಿಂದ ಹಲವಾರು ಡ್ಯಾನ್ಸ್ ತಂಡಗಳು ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿದರು ಕೊಳ್ಳೇಗಾಲ ತಾಲೂಕಿನ ಸಹಸ್ರಾರು ಜನರು ಈ ಒಂದು ಕಾರ್ಯಕ್ರಮದಲ್ಲಿ ಮಳೆಯನ್ನು ಲೆಕ್ಕಿಸದೆ ಪಾಲ್ಗೊಂಡು ಮನೋರಂಜನೆ ತುಂಬಿಕೊಂಡರು ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಶ್ರುತಿ ಅವರು ಅತ್ಯಂತ ಅಚ್ಚುಕಟ್ಟಾಗಿ ನಿರೂಪಣೆ ಮಾಡಿದರು. ಕೊಳ್ಳೇಗಾಲದ ಯುವ ಪ್ರತಿಭೆ ಹಾಗೂ ಕೊರಿಯೋಗ್ರಾಫರ್ ಶ್ರೀವತ್ಸ ಎಲ್ಲರೂ ಮೆಚ್ಚುಗೆಗೆ ಪಾತ್ರರಾದರು
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.