ಆರ್ಯವೈಶ್ಯ ಶಿಕ್ಷಣ ಸಂಸ್ಥೆ ಕಟ್ಟಡಕ್ಕೆ ಭೂಮಿ ಪೂಜೆ

ಕೊಳ್ಳೇಗಾಲ:
 ಕೊಳ್ಳೇಗಾಲ ಪಟ್ಟಣದ ಹೊರವಲಯ ಹಂಪಾಪುರ ಬಳಿ ಶ್ರೀ ಆರ್ಯವೈಶ್ಯ ಸಂಘದ ವತಿಯಿಂದ ನೂತನವಾಗಿ ಸುಸಜ್ಜಿತ ವಿದ್ಯಾಸಂಸ್ಥೆ ನಿರ್ಮಾಣವಾಗುತ್ತಿದ್ದು ಇಂದು ಭೂಮಿ ಪೂಜೆ ನಡೆಯಿತು ಧರ್ಮಗುರುಗಳಾದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲದ ಮಾಜಿ ಶಾಸಕರಾದ ಎನ್ ಮಹೇಶ್ ಎಸ್ ಪಾಲರಾಜು ಹಾಗೂ ನಿವೃತ್ತ ಪೊಲೀಸ ಅಧಿಕಾರಿ ಹಾಗೂ ಜೆಡಿಎಸ್ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬಿ ಪುಟ್ಟಸ್ವಾಮಿ ಜೆಡಿಎಸ್ ಟೌನ್  ಘಟಕದ ಅಧ್ಯಕ್ಷ ಎನ್ ಸುರೇಶ್ ಸೇರಿದಂತೆ ಅನೇಕ ಗಣ್ಯರು ಈ ಒಂದು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
 ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷರಾದಂತಹ ಎಪಿಎಸ್ ರಾಜ ಅವರು ಎಲ್ಲಾ ಗಣ್ಯ ಮಹನೀಯರನ್ನು ಆತ್ಮೀಯವಾಗಿ ಬರಮಾಡಿಕೊಂಡರು 
ಶ್ರೀ ವಾಸವಿ ವಿದ್ಯಾಸಂಸ್ಥೆ, ಕೊಳ್ಳೇಗಾಲ ತಾಲೂಕು ಮತ್ತು ಪಟ್ಟಣದ ಪ್ರಸಿದ್ಧ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿದೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಫಲಿತಾಂಶಗಳಲ್ಲಿ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಉತ್ತಮ ಫಲಿತಾಂಶ ಗಳಿಸುವಲ್ಲಿ ಯಶಸ್ವಿಯಾಗಿದೆ
 ಈ ಹಿನ್ನೆಲೆಯಲ್ಲಿ ಮುಂದುವರಿದು ಕೊಳ್ಳೇಗಾಲ ತಾಲೂಕು ಮತ್ತು ಸುತ್ತ ಮುತ್ತಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಕೊಳ್ಳೇಗಾಲ ಪಟ್ಟಣದ ಹೊರವಲಯ ಹಂಪಾಪುರ ಬಳಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ.
 ಈ ಹಿನ್ನೆಲೆಯಲ್ಲಿ ಇಂದು ಭೂಮಿ ಪೂಜ ಕಾರ್ಯಕ್ರಮ ನಡೆಯಿತು ಈ ಒಂದು ಕಾರ್ಯಕ್ರಮದಲ್ಲಿ ಆರ್ಯವೈಶ್ಯ ಸಮುದಾಯದ ಹಿರಿಯ ಮುಖಂಡರು ಸಂಘದ ಪದಾಧಿಕಾರಿಗಳು ಹಾಗೂ ಮಹಿಳಾ ಪದಾಧಿಕಾರಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು
 ವರದಿ- ನಿಂಪು  ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.