*ಮ.ಮ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರಘು ಎತ್ತಂಗಡಿ*
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ
ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಅವರನ್ನು ವರ್ಗಾವಣೆ ಮಾಡಿ, ನೂತನ ಕಾರ್ಯದರ್ಶಿಯಾಗಿ ಜಿ.ಪುರುಷೋತ್ತಮ ಅವರನ್ನು ನೇಮಕ ಮಾಡಿ ಧಾರ್ಮಿಕ ದತ್ತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಾಲಾ ಎಸ್ ಅವರು ಆದೇಶ ಹೊರಡಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ಪ್ರಾಧಿಕಾರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಎ.ಈ ರಘು ಅವರಿಗೆ ಯಾವುದೇ ಸ್ಥಳ ತೋರಿಸದೇ ಅವರ ಸ್ಥಳಕ್ಕೆ ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಮುಜರಾಯಿ ಕಾಮಗಾರಿಗಳು, ನಗರ ಸಭಾವಲಯದಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಪುರುಷೋತ್ತಮ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ವರದಿ- ನೂರುಲ್ಲಾ ಕೌದಳ್ಳಿ
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.