ಕೊಳ್ಳೇಗಾಲ. ಪಟ್ಟಣದ ನ್ಯಾಷನಲ್ ಮೈದಾನದಲ್ಲಿ ಇಂದು ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಆಟೋಟ ಸ್ಪರ್ಧೆಯನ್ನು  ಆಯೋಜಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಕ್ರೀಡಾಕೂಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರು ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, 2026-27 ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಶಿಕ್ಷಕರ ಕ್ರೀಡಾಕೂಟ ಮತ್ತು ಪಠ್ಯೇತರ ಚಟುವಟಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಶಿಕ್ಷಕರಿಗೆ ಶುಭ ಕೋರಿದರು. 
ನಂತರ ಶಿಕ್ಷಕರಿಗೆ ವಾಲಿಬಾಲ್, ಥ್ರೋಬಾಲ್, ಸೇರಿದಂತೆ ಹಲವು ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂಧರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಹದೇವ ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ್, ಸರ್ಕಾರಿ ನೌಕರರ ಅಲೆಕ್ಸಾಂಡರ್, ಕಾರ್ಯದರ್ಶಿ, ನಿರ್ದೇಶಕರು ಪ್ರಕಾಶ್, ಹರೀಶ್
ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯದರ್ಶಿ ಜಿಲ್ಲಾ ಖಜಾಂಚಿ ನಂದೀಶ್, ತಾಲ್ಲೂಕು ಉಪಾಧ್ಯಕ್ಷರು ಪುಟ್ಟಮಾದಮ್ಮ, ಪ್ರಾಥಮಿಕ ಹಾಗೂ ಪ್ರೌಡಶಾಲಾ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರು ಇದ್ದರು.

ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.