ವಿಷ ಕುಡಿದು ಗರಿಕೆ ಖಂಡಿ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ


ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣ ಸರಹದ್ದಿನಲ್ಲಿ ಬರುವ ಗರಿಕೆ ಖಂಡಿ ಗುಡ್ಡೆಯೂರು ಹಳ್ಳದ ಬಳಿ ಅರಣ್ಯ ಪ್ರದೇಶದಲ್ಲಿ 55 ರಿಂದ 60 ವರ್ಷ ವಯಸ್ಸಿನ ಗಂಡಸಿನ ಶವ ಪತ್ತೆಯಾಗಿದೆ. .

ರಾಮಪುರ ಪೊಲೀಸರು ಭೇಟಿ : ಘಟನಾ ಸ್ಥಳಕ್ಕೆ ಸುದ್ದಿ ತಿಳಿಯುತ್ತಿದ್ದಂತೆ ರಾಮಾಪುರ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ಹಾಗೂ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುರುಸ್ವಾಮಿ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿ ಘಟನಾ ಸ್ಥಳದಲ್ಲಿ ವಿಷದ ಬಾಟಲ್ ಪತ್ತೆ ಆಗಿರುವುದರಿಂದ 50 ರಿಂದ 60 ವರ್ಷ ವಯಸ್ಸಿನ ಗಂಡಸಿನ ಸವ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. .

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸವಗಾರದಲ್ಲಿ ವ್ಯಕ್ತಿಯ ಶವ ಮರಣೋತ್ತರ ಪರೀಕ್ಷೆ ನಡೆಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ಕೈಗೊಂಡಿದ್ದಾರೆ....

ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.