ಕೊಳ್ಳೇಗಾಲ ಕೊಳ್ಳೇಗಾಲ ತಾಲೂಕು ಮಟ್ಟದ ಕ್ರೀಡಾಕೂಟ ಮಂಗಳವಾರ ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಕಾಲೇಜು ಆವರಣದ ಕ್ರೀಡಾಂಗಣದಲ್ಲಿ ಇಂದು ನಡೆಯಿತು
ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿಯವರು ಗುಂಡು ಎಸೆಯುವ ಮೂಲಕ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು
ಈ ವೇಳೆ ಮಾತನಾಡಿದ ಅವರು ದಸರಾ ಹಬ್ಬದ ಅಂಗವಾಗಿ ಪ್ರತಿ ವರ್ಷ ರಾಜ್ಯ ಸರ್ಕಾರ ತಾಲೂಕು ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ದಸರಾ ಕ್ರೀಡಾ ಸ್ಪರ್ಧೆಯನ್ನು ನಡೆಸುತ್ತಾ ಬಂದಿದೆ
ಪ್ರಸಕ್ತ ವರ್ಷವೂ ಸಹ ದಸರ ಕ್ರೀಡಾಕೂಟ ಆಯೋಜಿಸಲಾಗಿದ್ದು ಈ ಒಂದು ಕ್ರೀಡಾಕೂಟದಲ್ಲಿ ಎಲ್ಲಾ ಬಗೆಯ ಕ್ರೀಡಾ ಕ್ರೀಡೆಗಳನ್ನು ಆಯೋಜಿಸಲಾಗಿದೆ
ಇದರಲ್ಲಿ ಕೊಳ್ಳೇಗಾಲ ತಾಲೂಕಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪಾಲ್ಗೊಳ್ಳುತ್ತಿದ್ದು ಈ ಸ್ಪರ್ಧೆ ನಂತರ ವಿಜೇತರಾದವರು ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ ಅವರು ಎಲ್ಲಾ ಕ್ರೀಡಾ ಸ್ಪರ್ಧೆಗಳಿಗೆ ಶುಭ ಹಾರೈಸಿದರು
ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಪ್ರಭಾರ ನಿರ್ದೇಶಕರಾದ ಗಿರೀಶ್ ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುಳಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ರಾಜೇಂದ್ರ ಮಾಜಿ ನಗರಸಭೆ ಸದಸ್ಯ ಬಸ್ತೀಪುರ ಶಾಂತರಾಜು, ಬ್ಲಾಕ್ ಅದ್ಯಕ್ಷ ತೋಟೇಶ್, ಹಾಗೂ ಶಿಕ್ಷಣ ಇಲಾಖೆ ಕ್ರೀಡಾ ವಿಭಾಗದ ದೈಹಿಕ ಶಿಕ್ಷಕರುಗಳು ಹಾಜರಿದ್ದರು
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.