ಯಳಂದೂರು : ಯಳಂದೂರು ಪಟ್ಟಣದಲ್ಲಿ ಶನಿವಾರ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಕೊಳ್ಳೇಗಾಲ ಶಾಸಕ ಎಆರ್ ಕೃಷ್ಣಮೂರ್ತಿಯವರು ಪತ್ರಕರ್ತರು ಧರಿಸಿದ್ದ ಸಮವಸ್ತ್ರವನ್ನು ಗಮನಿಸಿ ನಿಮ್ಮ ಡ್ರೆಸ್ ಕೋಡ್ ತುಂಬಾ ಚೆನ್ನಾಗಿದೆ ಹಿಂದಿ ಫಿಲಂ ಹೀರೋಗಳ ರೀತಿ ಕಾಣುತ್ತಿದ್ದೀರಿ ಎಂದು ಖುಷಿಯಿಂದ ಮೆಚ್ಚುಗೆ ವ್ಯಕ್ತಪಡಿಸಿದರು.
 ನಂತರ ಕಾರ್ಯಕ್ರಮಕ್ಕೆ ಆಗಮಿಸಿ ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭ ಉದ್ಘಾಟಿಸಿದ ಶಾಸಕ ಎಆರ್ ಕೃಷ್ಣಮೂರ್ತಿ ಅವರು ಮಾತನಾಡಿ ಪತ್ರಕರ್ತರು ವಸ್ತು ನಿಷ್ಠ ವರದಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು ಪತ್ರಕರ್ತರಿಗೆ ತಮ್ಮದೇ ಆದ ಬದ್ಧತೆ ಇದೆ ಅದನ್ನು ಉಳಿಸಿಕೊಂಡು ಹೋಗಬೇಕೆಂದು ತಿಳಿಸಿದರು ಸಂಘದ ಬೇಡಿಕೆಗಳನ್ನು ಪ್ರಸ್ತಾಪಿಸಿದ ಅವರು ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸೌಲಭ್ಯ ಮತ್ತು ಅನುಕೂಲಕ್ಕಾಗಿ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ತಿಳಿಸಿದರು 
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ವಕೀಲರಾದ ಗೌಡಳ್ಳಿ ಮಹೇಶ್ ಅವರು ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಇದುವರೆಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತನ್ನದೇ ಆದ ಗಟ್ಟಿತನ ಉಳಿಸಿಕೊಂಡಿತ್ತು ಆದರೆ ಕಳೆದ ಬಾರಿ ನಡೆದ ಚುನಾವಣೆ ನಂತರ ಸಂಘದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳಿಂದ ಕೆಲವರು ಮನನೊಂದು ಕಾರ್ಯ ನಿರತ ಪತ್ರಕರ್ತರ ದ್ವನಿ ಸಂಘಟನೆ ಮೂಲಕ ಒಂದಾಗಿದ್ದಾರೆ ಇವರೆಲ್ಲರೂ ಮುಂದಿನ ದಿನಗಳಲ್ಲಿ ಸಂಘದಲ್ಲಿ ಉತ್ತಮವಾಗಿ ಮುನ್ನಡೆಯಲಿ ಎಂದು ಶುಭ ಹಾರೈಸಿದರು 
ಜಿಲ್ಲಾಧ್ಯಕ್ಷ ನಿಂಪುರಾಜೇಶ್ ಅವರು ಮಾತನಾಡಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಮಾದರಿ ಸಂಘಟನೆಯಾಗಿ ಸಾಮಾಜಿಕ ಕಳಕಳಿಯೊಂದಿಗೆ ಕೆಲಸ ಮಾಡಲಿದೆ ಎಂದರು ವೇದಿಕೆಯಲ್ಲಿ ನೂತನ ಅಧ್ಯಕ್ಷ ಪುರುಷೋತ್ತಮ್ ಕಾರ್ಯದರ್ಶಿ ನಂಜುಂಡಸ್ವಾಮಿ ಮತ್ತು ಪದಾಧಿಕಾರಿಗಳು ಹಾಗೂ ನಿರ್ದೇಶಕರು ಸದಸ್ಯರುಗಳಿಗೆ ಸಂಘದ ಗುರುತಿನ ಚೀಟಿ ನೀಡಲಾಯಿತು. ಕಾರ್ಯಕ್ರಮದಲ್ಲಿ  ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಿನಕಹಳ್ಳಿ ಪ್ರಭುಸ್ವಾಮಿ ಮತ್ತು ಯಳಂದೂರು ಸರ್ಕಲ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡ ಯರಿಯೂರು ರಾಜಣ್ಣ ಗುಂಬಳ್ಳಿ ರಾಜಣ್ಣ ಸೇರಿದಂತೆ ಯಳಂದೂರು ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು 

ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.