ಕೊಳ್ಳೇಗಾಲದ ಮಂತ್ರಾಲಯ ಕಂಪ್ಯೂಟರ್ ಸೆಂಟರ್ ತರಭೇತಿ ಕೇಂದ್ರಕ್ಕೆ ಅತ್ಯುತ್ತಮ ರಾಜ್ಯ ಪ್ರಶಸ್ತಿ
ಕೊಳ್ಳೇಗಾಲ: ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಜರುಗಿದ ಕಿಯೋನಿಕ್ಸ್ ಸಂಸ್ಥೆಯ 50ನೇ ವರ್ಷದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ನಗರದ ಮಂತ್ರಾಲಯ ಐಟಿ ಹಟ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಗೆ ರಾಜ್ಯ ಮಟ್ಟದ ಅತ್ಯುತ್ತಮ ತರಬೇತಿ ಕೇಂದ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಹಾಗೂ ಶಾಸಕರ ಶರತ್ ಕುಮಾರ್ ಬಚ್ಚೇಗೌಡ, ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಅವರ ಅಮೃತ ಹಸ್ತದಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂತ್ರಾಲಯ ಐಟಿ ಹಟ್ಸ್ನ ವ್ಯವಸ್ಥಾಪಕ ಪಾಲುದಾರ ಪರಮೇಶ್ ಎಸ್.ಪುಷ್ಪ ಎಸ್. ಅವರು ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು.
ತಾಲ್ಲೂಕಿನ ಏಕೈಕ ಮಾನ್ಯತೆ ಪಡೆದ ಸರ್ಕಾರಿ ಕಂಪ್ಯೂಟರ್ ತರಬೇತಿ ಸಂಸ್ಥೆಯಾಗಿರುವ ಮಂತ್ರಾಲಯ ಐಟಿ ಹಟ್ಸ್, ಹಲವು ವರ್ಷಗಳಿಂದ ಗ್ರಾಮೀಣ ಹಾಗೂ ಪಟ್ಟಣ ಭಾಗದ ಯುವಜನತೆಗೆ ಗುಣಮಟ್ಟದ ಐಟಿ ಕೌಶಲ್ಯ ತರಬೇತಿ ನೀಡುತ್ತಾ ಬಂದಿದೆ. ಸಂಸ್ಥೆಯು ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತೋರುತ್ತಿರುವ ಬದ್ಧತೆ ಮತ್ತು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ನೀಡುತ್ತಿರುವ ಕೊಡುಗೆಯನ್ನು ಪರಿಗಣಿಸಿ ಈ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಗ್ರಾಮೀಣ ಭಾಗದ ಸಂಸ್ಥೆಗೆ ಇಂತಹ ಉನ್ನತ ಮಟ್ಟದ ಗೌರವ ಲಭಿಸಿರುವುದಕ್ಕೆ ಸ್ಥಳೀಯ ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿದ್ಯಾರ್ಥಿ ವೃಂದ ಹರ್ಷ ವ್ಯಕ್ತಪಡಿಸಿ, ಸಂಸ್ಥೆಯ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದ್ದಾರೆ
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.