ಕೊಳ್ಳೇಗಾಲ: ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಳ್ಳೇಗಾಲ ಮತ್ತು ಯಳಂದೂರು ತಾಲೂಕುಗಳಲ್ಲಿ ಸುಮಾರು 1500 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳ ಸುರಿಮಳೆಯಾಗುತ್ತಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿಯವರು ತಿಳಿಸಿದರು 
ಮಂಗಳವಾರ ಕೊಳ್ಳೇಗಾಲ ತಾಲೂಕಿನ ಕರಾಳಕಟ್ಟೆ ಗ್ರಾಮ ಕೆಂಪನಪಾಳ್ಯ ಗ್ರಾಮ ಬೆಂಡ್ರಳ್ಳಿ ಗ್ರಾಮ ಹಾಗೂ ಪಟ್ಟಣ ವ್ಯಾಪ್ತಿಯ ದೊಡ್ಡ ನಾಯಕರ ಬೀದಿ, ಮತ್ತು ಚಿಕ್ಕನಾಯಕರ ಬೀದಿ ಗಳಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಭೂಮಿ ಪೂಜೆ ನಡೆಸಿ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
 ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೊಳ್ಳೇಗಾಲಕ್ಕೆ ಆಗಮಿಸಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುಮಾರು 1500 ಕೋಟಿಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೊಳ್ಳೇಗಾಲ ಪಟ್ಟಣದಲ್ಲಿ ಸುಸಜ್ಜಿತ 250 ಹಾಸಿಗೆಗಳ ಜಿಲ್ಲಾ ಮಟ್ಟದ ಆಸ್ಪತ್ರೆ ಹಾಗೂ ಮುಡಿಗುಂಡ ಸೇತುವೆ ನವ ನಿರ್ಮಾಣ ಸೇರಿದಂತೆ ಹಲವಾರು ಹೊಸ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
 ಕೊಳ್ಳೇಗಾಲದ ಎಲ್ಲಾ ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲಾ ವರ್ಗದ ಸಮುದಾಯದ ಸಮುದಾಯ ಭವನಗಳಿಗೆ ಲಕ್ಷಾಂತರ ರೂಗಳನ್ನು ನೀಡಲಾಗಿದೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಗಳ ಡಾಂಬರೀಕರಣ ಹಾಗೂ ಸಿಸಿ ರಸ್ತೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಗುಣಮಟ್ಟದ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು. ಮುಂದುವರಿದು ಮಾತನಾಡಿದರು ನಾನು ಚುನಾವಣೆಗೆ ನಿಂತ ಸಂದರ್ಭದಲ್ಲಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಮತಯಾಚನೆ ಮಾಡಿದ ಸಂದರ್ಭ ದಲ್ಲಿ ಗ್ರಾಮಗಳು ಜನರು ಕೇಳಿಕೊಂಡಿದ್ದ ಭರವಸೆಗಳಂತೆ ಕೊಟ್ಟ ಮಾತಿನಂತೆ ಈಡೇರಿಸಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದೇನೆ ಕಳೆದು ಮೂರುವರೆ ವರ್ಷಗಳಿಂದ ನಾನು ಭರವಸೆ ಕೊಟ್ಟಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಸಹ ಅಭಿವೃದ್ಧಿ ಯೋಜನೆಗಳು ಇದೇ ರೀತಿ ಮುಂದುವರೆಯಲಿದೆ ನಾನು ನಿಮಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇನೆ ಹಾಗಾಗಿ ಮುಂದಿನ ದಿನಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ನೀವು ಸಹ ನನಗೆ ಆಶೀರ್ವದಿಸಬೇಕೆಂದು ಸುದ್ದಿಗಾರರ ಮುಖಾಂತರ ಮನವಿ ಮಾಡಿಕೊಂಡರು
ಕಾರ್ಯಕ್ರಮದ ಸಂದರ್ಭದಲ್ಲಿ ಶಾಸಕರ ಜೊತೆ ಜಿಲ್ಲಾ ರೈತ ಸಂಘದ ಮುಖಂಡ ಶೈಲೇಂದ್ರ ಜಕ್ಕಳ್ಳಿ ಸುಬ್ರಹ್ಮಣ್ಯ ಹಾಗೂ ಕರಾಳೆಕಟ್ಟೆ ಗ್ರಾಮದ ಆದಿವಾಸಿ ಮುಖಂಡರು ಮತ್ತು ಪಕ್ಷದ ಮುಖಂಡರುಗಳಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೊಪ್ಪಳಿ ಮಹದೇವ ನಾಯಕ ಮಾಜಿ ನಗರಸಭಾ ಸದಸ್ಯ ಬಸ್ತಿಪುರ ಶಾಂತರಾಜು ಶಂಕಪಪುರ ಜಗದೀಶ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.