ಕೊಳ್ಳೇಗಾಲ ಪುಟ್ಟಸ್ವಾಮಿಯವರ ನಾಯಕತ್ವ ಒಳ್ಳೆಯ ವ್ಯಕ್ತಿತ್ವ ಹಾಗೂ ಉತ್ತಮ ಗುಣಗಳನ್ನು ಮೆಚ್ಚಿ ಅವರ ನೇತೃತ್ವದಲ್ಲಿ ಅವರಿಗೆ ಬೆಂಬಲವಾಗಿ ನಾವೆಲ್ಲರೂ ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಕೊಳ್ಳೇಗಾಲ ಪಟ್ಟಣದ ನಾಯಕ ಸಮುದಾಯದ ಮುಖಂಡ ಹಾಗೂ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಸೇವಾ ಸಮಿತಿ ಅಧ್ಯಕ್ಷರಾದ ಜಗದೀಶ್ ಅವರು ತಿಳಿಸಿದರು
ಕೊಳ್ಳೇಗಾಲ ಪಟ್ಟಣದಲ್ಲಿ ಶುಕ್ರವಾರ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಾಯಕ ಸಮುದಾಯ 25 ಹೆಚ್ಚು ಮಂದಿ ಜೆಡಿಎಸ್ ಪಕ್ಷಕ್ಕೆ ಇಂದು ಅಧಿಕೃತವಾಗಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಗದೀಶ್ ಅವರು ಮಾತನಾಡಿದರು. ಪೊಲೀಸ್ ಅಧಿಕಾರಿಯಾಗಿದ್ದ ಪುಟ್ಟಸ್ವಾಮಿಯವರು ತಮ್ಮ ಸೇವಾ ಅವಧಿಯಲ್ಲಿ ಜನರಿಗೆ ಉತ್ತಮವಾಗಿ ಸ್ಪಂದಿಸಿದ್ದರು ಹಾಗೂ ಸೇವೆಯಲ್ಲಿದ್ದಾಗಲೂ ಸಹ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಎಲ್ಲರಿಗೂ ಸ್ಪಂದಿಸುತ್ತಿದ್ದರು.
ಇದೀಗ ಅವರು ಜೆಡಿಎಸ್ ಪಕ್ಷದಲ್ಲಿರುವುದರಿಂದ ನಾವೆಲ್ಲರೂ ಅವರ ನಾಯಕತ್ವವನ್ನು ಬೆಂಬಲಿಸಿ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ ಎಂದು ತಿಳಿಸಿದರು ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸೇರಿದಂತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುಟ್ಟಸ್ವಾಮಿ ಅವರ ಗೆಲುವಿಗಾಗಿ ನಾವೆಲ್ಲರೂ ಕೈಜೋಡಿಸುವುದಾಗಿ ಭರವಸೆ ನೀಡಿದರು.
ಜೆಡಿಎಸ್ ಕ್ಷೇತ್ರ ಅಧ್ಯಕ್ಷ ಪುಟ್ಟಸ್ವಾಮಿಯವರು ಮಾತನಾಡಿ, ಕಳೆದ ಬಾರಿ ನಾನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕಿತ್ತು ಆದರೆ ಕೆಲವೊಂದು ಕಾರಣಗಳಿಂದ ಅವಕಾಶ ವಂಚಿತನಾದೆ ಆದರೆ ಈ ಬಾರಿ ಖಡಾ ಖಂಡಿತವಾಗಿ ಕೊಳ್ಳೇಗಾಲ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದವರು.
ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲದಿಂದ ಗೆಲ್ಲುವ ವಿಶ್ವಾಸ ಇದೆ ಎಂದು ಅವರು ತಿಳಿಸಿದರು. ಇಂದು ನಡೆದ ಸಭೆಯಲ್ಲಿ ಜೆಡಿಎಸ್ ಹಿರಿಯ ಮುಖಂಡರಾದ ಶಿವಮಲ್ಲೇಗೌಡ, ರಾಜಪ್ಪ ಕೊಳ್ಳೇಗಾಲ ಟೌನ್ ಘಟಕ ಅಧ್ಯಕ್ಷ ಎನ್ ಸುರೇಶ್ ಜೆಡಿಎಸ್ ಮಹಿಳಾ ಮುಖಂಡರಾದ ಶ್ರೀಮತಿ ಮಧು ಉಪಸ್ಥಿತರಿದ್ದರು. ಕೊಳ್ಳೇಗಾಲ ಪಟ್ಟಣದ ನಾಯಕ ಸಮುದಾಯದ 25ಕ್ಕೂ ಹೆಚ್ಚು ಯುವಕರು ಪೂರ್ವಿಕ್ ಮತ್ತು ಜಗದೀಶ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು
. ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.