ಕೊಳ್ಳೇಗಾಲ:  ಇದೇ ತಿಂಗಳು 30 ರಂದು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೊಳ್ಳೇಗಾಲಕ್ಕೆ ಆಗಮಿಸಲಿದ್ದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 
ಈ ಹಿನ್ನೆಲೆಯಲ್ಲಿ ಬುಧವಾರ ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಅತಿ ಗಣ್ಯರ ವಸತಿ ಗೃಹದಲ್ಲಿ ಕೊಳ್ಳೇಗಾಲ ಶಾಸಕ ಎಆರ್ ಕೃಷ್ಣಮೂರ್ತಿ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ರೂಪಾ ರವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಹೈವೋಲ್ಟೇಜ್ ಮೀಟಿಂಗ್ ನಡೆಯಿತು.
 ಈ ಒಂದು ಅಧಿಕಾರಿಗಳ ಸಭೆಯಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
 ನೂರಾರು ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆಂದು ತಿಳಿದು ಬಂದಿದೆ.
 ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಈ ಒಂದು ಬೃಹತ್ ಸಮಾರಂಭ ಆಯೋಜಿಸಲಾಗಿದ್ದು ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣಮೂರ್ತಿಯವರು ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದಾರೆ.   ಪ್ರಥಮ ಬಾರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ವಿವಿಧ ಸಚಿವರುಗಳು ಕೊಳ್ಳೇಗಾಲಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಮಂತ್ರಿ ಮಹೋದಯರನ್ನು ಅದ್ದೂರಿಯಾಗಿ ಸ್ವಾಗತಿಸಲು ಏರ್ಪಾಡು ಮಾಡಿಕೊಳ್ಳಲಾಗುತ್ತಿದೆ.
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.