
ಹನೂರು : ತಾಲ್ಲೂಕು ಪಂಚಾಯಿತಿ ವತಿಯಿಂದ ಸಂಜೀವಿನಿ ಎನ್ ಆರ್ ಎಂ ಎಲ್ ಯೋಜನೆಯಡಿ ತಾಲೂಕಿನ ರಾಮಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ತಿರ ಮಾಸಿಕ ಸಂತೆಯನ್ನು ರಾಮಾಪುರ ಪೊಲೀಸ್ ಸಬ್ ಇನ್ಸ್ ಫೆಕ್ಟರ್
ಈಶ್ವರ್ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಈಶ್ವರ್ ತಾಲ್ಲೂಕಿನ ವಿವಿದ ಗ್ರಾಮ ಪಂಚಾಯಿತಿಗಳ ಮಹಿಳಾ ಸ್ವ ಸಹಾಯ ಗುಂಪುಗಳ ಒಕ್ಕೂಟಗಳಿಂದ ಮಹಿಳೆಯರು ಉತ್ಪಾದನೆ ಮಾಡಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿಸುವ ಸಲುವಾಗಿ ಮಾಸಿಕ ಸಂತೆ ಏರ್ಪಡಿಸುತ್ತಿರುವುದು ಮಹಿಳೆಯರಿಗೆ ತುಂಬಾ ಉಪಯೋಗವಾಗುತ್ತದೆ.
ಈ ಪ್ರಕ್ರಿಯೆಯು ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಹಾಯಕವಾಗಿದ್ದು, ಇದರಿಂದ ಮಹಿಳೆಯರು ಸ್ವಾಲಂಬನೆಯಿಂದ ಜೀವನ ನಿರ್ವಹಣೆ ಮಾಡಲು ಅನುಕೂಲವಾಗಲಿದೆ. ಮಹಿಳೆಯರು ಕುಟುಂಬಕ್ಕೆ ಮಾದರಿಯಾಗಿದ್ದು, ಮಾದಕ ಮುಕ್ತ ಕರ್ನಾಟಕ ಅಭಿಯಾನದಡಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಪ್ರಯತ್ನಿಸಿ. ಮುಂದಿನ ಯುವಪೀಳಿಗೆ ಮಾದಕ ವಸ್ತುಗಳ ಚಟದಿಂದ ಮುಕ್ತರಾಗಲು ಪಣತೊಡಬೇಕೆಂದು ತಿಳಿಸಿದರು.
ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಸಾರ್ವಜನಿಕವಾಗಿ ನಿಮ್ಮ ಹತ್ತಿರ ನೆರೆಹೊರೆಯಲ್ಲಿ ಕಂಡುಬಂದರೆ ತಕ್ಷಣ ಸರ್ಕಾರಿ ಸಹಾಯವಾಣಿಗೆ ಕರೆಮಾಡಿ ತಿಳಿಸಬೇಕೆಂದು ಎಲ್ಲರಿಗೂ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಎನ್.ಆರ್.ಎಲ್.ಎಂ ವಲಯ ಮೇಲ್ವಿಚಾರಕರಾದ ಕುಮಾರಿ.ಸಿ, ತಾಲ್ಲೂಕು ವ್ಯವಸ್ಥಾಪಕರಾದ ಲಿಂಗರಾಜು.ಬಿ, ಪೋಲೀಸ್ ಇಲಾಖೆಯ ಸಿಬ್ಬಂದಿಗಳು ತಾಲ್ಲೂಕು ಸಂಜೀವಿನಿ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.
ವರದಿ : ಸಾಗರ್ ನಿಂಪು