

ವರದಿ :ಸಾಗರ್ ನಿಂಪು
ಹನೂರು : ಹನೂರು ಕ್ರೇತ್ರದ ವಿವಿಧೆಡೆ ಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗಣೇಶ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವ ಭಕ್ತ ಮಂಡಳಿಯವರಿಗೆ ಶಾಸಕ ಎಂಆರ್ ಮಂಜುನಾಥ್ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು.
ಹನೂರು ತಾಲೂಕಿನ ಗ್ರಾಮಗಳಲ್ಲಿ 350ಕ್ಕೂ ಹೆಚ್ಚು ಕಡೆ ಗೌರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ
ಸಂಪ್ರದಾಯದಂತೆ ಗೌರಿ ಗಣೇಶ ಹಬ್ಬವನ್ನು ಹನೂರು ತಾಲೂಕಿನಲ್ಲಿ 350ಕ್ಕೂ ಹೆಚ್ಚು ಗೌರಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿರುವ ಭಕ್ತ ಮಂಡಳಿಯವರಿಗೆ ಶುಭಶಯ ಕೋರಿದ ಶಾಸಕರು, ಹಬ್ಬವನ್ನು ಗ್ರಾಮಗಳಲ್ಲಿ ಶಾಂತಿಯುತವಾಗಿ ಮತ್ತು ಪರಿಸರಕ್ಕೆ ಮಾರಕವಾಗಿರುವ ಗಣಪತಿ ಗಳನ್ನು ತ್ಯಜಿಸಿ ಪರಿಸರ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು.
ಗೌರಿ ಗಣೇಶ ಹಬ್ಬ ಶುಭವುಂಟುಮಾಡಲಿ : ಮಳೆ ಇಲ್ಲದೆ ಕಂಗಾಲಾಗಿರುವ ರೈತನಿಗೆ ಹಾಗೂ ತಾಲೂಕಿನ ಜನತೆಗೆ ಮಳೆರಾಯನ ಶುಭ ಉಂಟಾಗಲಿ ಜೊತೆಗೆ ಗ್ರಾಮಗಳಲ್ಲಿ ಪ್ರತಿಯೊಬ್ಬರು ಗೌರಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲು ಸರ್ಕಾರದ ಮಾರ್ಗಸೂಚಿಯಂತೆ ಕೆರೆಕಟ್ಟೆಗಳಿಗೆ ಪಂಚಾಯತಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನೆ ಮಾಡಲು ಸ್ಥಳ ನಿಗದಿ ಮಾಡಿ ಅವಕಾಶವನ್ನು ಕಲ್ಪಿಸಲಾಗಿದ್ದು ಜನತೆ ಭಕ್ತರು ಶಾಂತಿಯುತವಾಗಿ ಹಬ್ಬ ಆಚರಿಸಿ ಡಿಜೆ ಮತ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡದೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿ ಎಂದರು
ಗೌರಿ ಗಣೇಶನನ್ನು ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿ ಧಾರ್ಮಿಕ ಭಾವನೆಗಳೊಂದಿಗೆ ಶಾಂತಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ತಾಲೂಕಿನ ಜನತೆಗೆ ಶಾಸಕ ಎಂ ಆರ್ ಮಂಜುನಾಥ್ ಶುಭ ಕೋರಿದರು.