ಸ್ಲಂ ಜನರ ಸೌಲಭ್ಯಗಳಿಗೆ ಸದಾ ಬೆಂಬಲ ಜೆಡಿಎಸ್ ಕ್ಷೇತ್ರ ಅಧ್ಯಕ್ಷ ಪುಟ್ಟಸ್ವಾಮಿ
ಕೊಳ್ಳೇಗಾಲ : ಸ್ಲಂ ಜನರ ಮೂಲಭೂತ ಸೌಕರ್ಯಗಳು ಹಾಗೂ ಸರ್ಕಾರದ ಜನಪರ ಅನುಕೂಲಗಳು ಮತ್ತು ಯೋಜನೆಗಳು ದೊರೆಯುವ ನಿಟ್ಟಿನಲ್ಲಿ ಸದಾ ನಿಮ್ಮ ಸಂಘಟನೆಗೆ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಕೊಳ್ಳೇಗಾಲ ಜೆಡಿಎಸ್ ಕ್ಷೇತ್ರ ಅಧ್ಯಕ್ಷ ಬಿ ಪುಟ್ಟಸ್ವಾಮಿ ತಿಳಿಸಿದರು
ಕೊಳ್ಳೇಗಾಲದ ಜೆಡಿಎಸ್ ಕಚೇರಿಯಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸ್ಲಂ ಜನರ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆಗೆ ಅವರು ಮಾತನಾಡಿದರು
ಸೆಪ್ಟಂಬರ್ ಮೂರರಂದು ಕೊಳ್ಳೇಗಾಲದ ರೋಟರಿ ಭವನದಲ್ಲಿ ನಡೆಯುವ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ ಅವರು ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಶುಭಾಶಯ ತಿಳಿಸಿ ನಿಮ್ಮ ಹೋರಾಟದ ಜೊತೆಗೆ ಸದಾ ಬೆಂಬಲವಾಗಿರುವುದಾಗಿ ಭರವಸೆ ನೀಡಿದರು
ಸ್ಲಂ ಜನರು ಹಲವಾರು ಮೂಲಭೂತ ಸೌಕರ್ಯಗಳ ಕೊರತೆಯನ್ನು ಅನುಭವಿಸುತ್ತಿದ್ದಾರೆ ಇಂತಹ ಜನಗಳಿಗಾಗಿ ನೀವು ಸಂಘಟನೆ ಮೂಲಕ ಹೋರಾಟ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಸರೋಜಮ್ಮ ಹಾಗೂ ಪ್ರಧಾನ ಕಾರ್ಯದರ್ಶಿ ಶಿವಮ್ಮ ಮತ್ತು ಮುಖಂಡರಾದ ಬಸ್ತಿ ಪುರ ಸೋಮಣ್ಣ ಹಾಗೂ ಭೀಮ ನಗರ ಎನ್ ಸುರೇಶ್ ಉಪಸ್ಥಿತರಿದ್ದರು
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.