ರಾಜ್ಯದಲ್ಲಿ ಛಾಯಾಚಿತ್ರಗ್ರಾಹಕರ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ನಾಗೇಶ್ ಅವರು ಸರ್ಕಾರಕ್ಕೆ ಒತ್ತಾಯಿಸಿದರು
ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು ಆಯೋಜಿಸಲಾಗಿದ್ದ ವಿಶ್ವ ಛಾಯಾಚಿತ್ರ ಗ್ರಾಹಕರ ದಿನಾಚರಣೆಯ ಚಾಮರಾಜನಗರ ಜಿಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು
ರಾಜ್ಯದಲ್ಲಿ ಛಾಯಾಚಿತ್ರ ಗ್ರಾಹಕರ ಅಕಾಡೆಮಿ ಸ್ಥಾಪನೆ ಮಾಡುವ ಮೂಲಕ ಛಾಯಾ ಗ್ರಾಹಕರಿಗೆ ಸರ್ಕಾರ ಎಲ್ಲಾ ರೀತಿಯ ಅನುಕೂಲ ಮತ್ತು ಸೌಲಭ್ಯಗಳನ್ನು ಕಲ್ಪಿಸಬೇಕೆಂದವರು ಒತ್ತಾಯಿಸಿದರು
ಮುಂದುವರಿದು ಮಾತನಾಡಿದ ಅವರು ರಾಜ್ಯದಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಛಾಯಾಗ್ರಹಕರು ಇದ್ದಾರೆ ಇವರಿಗೆ ಯಾವುದೇ ರೀತಿಯ ಭದ್ರತೆ ಇಲ್ಲ ಅದರಲ್ಲೂ ಕೋವಿಡ್ ನಂತರದ ದಿನಗಳಲ್ಲಿ ಛಾಯಾಚಿತ್ರಗ್ರಾಹಕರ ಬದುಕು ಸಂಪೂರ್ಣ ದುಸ್ತರವಾಗಿದೆ ಎಂದು ಅವರು ತಿಳಿಸಿದರು
ರಾಜ್ಯದಲ್ಲಿ ಸರ್ಕಾರ ನಮ್ಮ ಸಂಘಟನೆಯನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಒಳಪಡಿಸಿದ್ದು ಸಂತೋಷ ಅಪಘಾತಗಳಿಂದ ಮೃತಪಟ್ಟ ಕುಟುಂಬಗಳಿಗೆ ಒಂದು ಲಕ್ಷ ರೂಗಳು ಹಾಗೂ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗಳಿಗೆ 50,000 ಚಿಕಿತ್ಸೆ ವೆಚ್ಚ ಭರಿಸಲಾಗುತ್ತಿದೆ ಹಾಗೆ ಛಾಯಾಗ್ರಾಹಕರ ಮಕ್ಕಳಿಗೂ ಸಹ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಸೌಲಭ್ಯಗಳನ್ನು ನೀಡಬೇಕು ಎಂದರು
ಸಭೆಯ ಅಧ್ಯಕ್ಷತೆ ವಹಿಸಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣಮೂರ್ತಿ ಅವರು ಮಾತನಾಡಿ ರಾಜ್ಯದಲ್ಲಿ ಛಾಯಾ ಗ್ರಾಹಕರಿಗೆ ಸರ್ಕಾರ ಎಲ್ಲಾ ರೀತಿಯ ಅನುಕೂಲ ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು
ನಿವೃತ್ತ ಪೊಲೀಸ ಅಧಿಕಾರಿ ಹಾಗೂ ಜೆಡಿಎಸ್ ಕ್ಷೇತ್ರದ ಅಧ್ಯಕ್ಷ ಬಿ ಪುಟ್ಟಸ್ವಾಮಿಯವರು ಮಾತನಾಡಿ ಛಾಯಾಗ್ರಾ ತೆಗೆಯುವ ಒಂದು ಫೋಟೋ ನಮ್ಮ ಇಲಾಖೆಗೆ ತುಂಬಾ ಅತಿ ಮುಖ್ಯ ಆಗಿರುತ್ತದೆ ಏಕೆಂದರೆ ಒಂದು ಫೋಟೋ ನೂರು ಸಾಕ್ಷಿಗಳನ್ನು ನೀಡಬಲ್ಲದು ಎಂದು ತಿಳಿಸಿದರು
ಮಲೆ ಮಹದೇಶ್ವರ ಬೆಟ್ಟ ಸಾಲೂರು ಮಠದ ಪೀಠಾಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಆರಂಭವಾಯಿತು ಕಾರ್ಯಕ್ರಮದಲ್ಲಿ ಎಚ್ ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ, ಡಾ. ದತ್ತೇಶ್ ಕುಮಾರ್ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆ ನಿರ್ಮಾತೃ ಓಲೆ ಮಹದೇವ ಕಾಂಗ್ರೆಸ್ ಯುವ ಮುಖಂಡ ಜಿಎನ್ ಲೋಕೇಶ್ ಡಾ. ಬಿಆರ್ ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ಆನಂದ ಮೂರ್ತಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು ಬಂದ ಎಲ್ಲ ಗಣ್ಯರುಗಳಿಗೆ ಕೊಳ್ಳೇಗಾಲ ತಾಲೂಕು ಛಾಯಾಗ್ರಾಹಕ ಸಂಘದ ಅಧ್ಯಕ್ಷ ಜಯಪ್ರಕಾಶ್ ಸ್ವಾಗತಿಸಿದರು
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.