ಹನೂರು : ಪಟ್ಟಣದ ಹೊರವಲಯದ ಹುಲಸುಗುಡ್ಡೆ ಬಳಿ ಅಪರಿಚಿತ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಧಾರುಣ ಘಟನೆ ಜರುಗಿದೆ.

ತಾಲ್ಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ಮಹೇಂದ್ರ(35) ಸುರೇಶ್(24), ಮುನಿಯಪ್ಪ(35)ಎಂಬವವರು ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ.

ಘಟನೆ ವಿವರ : ಗುರುವಾರ ಸಂಜೆ ಮೃತ ವ್ಯಕ್ತಿಗಳು ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೊಳ್ಳೇಗಾಲದಲ್ಲಿರುವ ಸ್ನೇಹಿತರ ಬಳಿ ದೇಣಿಗೆ ಪಡೆದು ಗಣೇಶ್ ಮೂರ್ತಿಯನ್ನು ತರಲು ತೆರಳುತ್ತಿದ್ದಾಗ ಪಟ್ಟಣದ ಹೊರವಲಯದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಮೀಪ ಮೈಸೂರಿನಿಂದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಅಪರಿಚಿತ ಕಾರೊಂದು ಹನೂರು ಕಡೆಯಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು ಓರ್ವನಿಗೆ ಗಂಭೀರ ಗಾಯಾವಾಗಿದ್ದ ವ್ಯಕ್ತಿಯನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡು ತನಿಖೆ ಆರಂಭಿಸಿದ್ದಾರೆ..

ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.