ರಾಮಪುರದಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆ ಗ್ರಾಮ ಪಂಚಾಯಿತಿ ಮುಂಭಾಗ ನಿವಾಸಿಗಳಿಂದ ಪ್ರತಿಭಟನೆ...
ಹನೂರು ತಾಲೂಕಿನ ರಾಮಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿಯೇ ಕಳೆದ ಹಲವಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದೆ ಹೀಗಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೀರಿನ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. .
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬೇಟಿ : ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಷ್ಪಲತಾ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ರೀತಿ ಅನುದಾನ ಹೆಚ್ಚಿನ ರೀತಿಯಲ್ಲಿ ಇರುವುದಿಲ್ಲ ಹೀಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹೆಚ್ಚಿನ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅನುದಾನ ಕೊರತೆ ಇರುವುದರಿಂದ ಸಮಸ್ಯೆ ಉಂಟಾಗಿದೆ ಹೀಗಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು . .
ಖಾಲಿ ಕೊಡಗಳು ಹಿಡಿದು ಪ್ರತಿಭಟನೆ : ರಾಮಪುರ ಗ್ರಾಮ ಪಂಚಾಯತಿ ಮುಂಭಾಗ ನಿವಾಸಿಗಳು ಖಾಲಿ ಬಿಂದಿಗೆಗಳನ್ನು ಹಿಡಿದು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದೆ ಇರುವ ಗ್ರಾಮ ಪಂಚಾಯಿತಿ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು ...
ವಿವಿಧ ಗ್ರಾಮಗಳಲ್ಲಿಯೂ ನೀರಿನ ಸಮಸ್ಯೆ : ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಗನಪುರ ಪಳನಿ ಮೇಡು, ಗೆಜ್ಜಲನಾಥ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಹಳೆಯ ಬೋರ್ ಗಳನ್ನು ಮತ್ತೆ ರಿ ಬೋರ್ ಮಾಡಿರುವ ಕೊಳವೆಬಾವಿಗಳಿಗೆ ಮೋಟಾರ್ ಪೈಪ್ಗಳನ್ನು ಅಳವಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಹಿರಿಯ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ. .
ರಾಮಪುರ ಪೊಲೀಸ್ರು ಬಂದೋಬಸ್ ಕಲ್ಪಿಸಿದ್ದರು
ಇದೇ ವೇಳೆಯಲ್ಲಿ ರಾಮಪುರ ರಾಜೇಂದ್ರ ಗಿರೀಶ್ ಹಾಗೂ ಇನ್ನಿತರರು ಇದ್ದರು.
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.