ಸಂದನಪಾಳ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬೀದಿಗಿಳಿದ ವಿದ್ಯಾರ್ಥಿಗಳು ...

ಹನೂರು ತಾಲೂಕಿನ ಮಾಟ೯ಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಸಂಧನಪಾಳ್ಯ ಗ್ರಾಮದ ಶಾಲಾ ವಿದ್ಯಾರ್ಥಿಗಳು ಖಾಲಿ ಬಿಂದಿಗೆ ಗಳನ್ನು ಹಿಡಿದು ರಸ್ತೆಗಳಿದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ..

ನೀರು ಕೊಡಿ ಜೀವ ಉಳಿಸಿ ವಿದ್ಯಾರ್ಥಿಗಳ ಆಗ್ರಹ: ಸಂದನಪಾಳ್ಯ ಹಾಗೂ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ   ಉಂಟಾಗಿರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ಜನಪ್ರತಿನಿಧಿ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿ ಆಗ್ರಹಿಸಿದರು . .

ಖಾಲಿ ಬಿಂದಿಗೆಗಳನ್ನು ಹಿಡಿದ ವಿದ್ಯಾರ್ಥಿಗಳು: ಕುಡಿಯುವ ನೀರಿನ ಸಮಸ್ಯೆ ಗಾಗಿ ವಿವಿಧ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಹಾಗೂ ಹಿರಿಯ ನಾಗರಿಕರು ಪ್ರತಿಭಟನೆ ನಡೆಸುತ್ತಿರುವುದು ಕಂಡು ಬಂದಿದೆ ಆದರೆ ಸಂಧನಪಾಳ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಇಲ್ಲಿನ ಶಾಲಾ ವಿದ್ಯಾರ್ಥಿಗಳು ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರದರ್ಶನ ಮಾಡುವ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಬೀದಿಗಿಳಿದು ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ..

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ  ಉಲ್ಬಣಗೊಂಡಿರುವುದರಿಂದ ಹನಿ ನೀರಿಗಾಗಿ ನಿವಾಸಿಗಳು ಪರದಾಡುವಂಥ ಪರಿಸ್ಥಿತಿ ಉಂಟಾಗಿರುವುದರಿಂದ ಇಲ್ಲಿನ ಶಾಲಾ ವಿದ್ಯಾರ್ಥಿಗಳು ಬೀದಿಗಿಳಿದು ಕಾಲಿ ಕೊಡಗಳನ್ನು ಹಿಡಿದು ನೀರಿನ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿದೆ ಹೀಗಾಗಿ ಇಲ್ಲಿನ ಜನಪ್ರತಿನಿಧಿ ಅಧಿಕಾರಿಗಳು ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ...
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.