ಕೊಳ್ಳೇಗಾಲ : ಕ್ರೀಡೆಯಿಂದ ಹಲವಾರು ಪ್ರಯೋಜನಗಳಿವೆ ಅವುಗಳನ್ನು ವಿದ್ಯಾರ್ಥಿ ಸಮುದಾಯ ಸದುಪಯೋಗಪಡಿಸಿಕೊಳ್ಳಬೇಕೆಂದು ಕೊಳ್ಳೇಗಾಲ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಾಜೇಂದ್ರ ಅವರು ತಿಳಿಸಿದರು
ಗುರುವಾರ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ದಸರಾ ಕ್ರೀಡಾಕೂಟದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಕ್ರೀಡೆಯಿಂದ ಪ್ರತಿಯೊಬ್ಬರಲ್ಲಿಯೂ ದೈಹಿಕ ಸದೃಢತೆ ದೈಹಿಕ ಮನೋಲೋಸ ಹಾಗೂ ದೈಹಿಕ ಬೆಳವಣಿಗೆ ಸೇರಿದಂತೆ ಹಲವಾರು ಅನುಕೂಲಗಳಿವೆ. ಆದ್ದರಿಂದ ವಿದ್ಯಾರ್ಥಿ ಸಮುದಾಯ ಕ್ರೀಡೆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ತಿಳಿಸಿದರು
ಮುಂದುವರೆದು ಮಾತನಾಡಿದ ಅವರು ಇವತ್ತಿನ ಪೀಳಿಗೆ ಹೆಚ್ಚು ಹೆಚ್ಚು ಸಾಮಾಜಿಕ ಜಾಲತಾಣಗಳ ಬಗ್ಗೆ ಆಸಕ್ತಿ ಹೊಂದಿದೆ ಅವುಗಳಲ್ಲಿ ಕ್ರೀಡೆಗಳ ಬಗ್ಗೆ ಈ ಹೆಚ್ಚಿನ ಕಾಳಜಿ ವಹಿಸುತ್ತಿದ್ದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಂತವರನ್ನು ನೋಡಿ ನೋಡಿ ನಾನು ಸಹ ಕ್ರೀಡೆಯಲ್ಲಿ ಯಶಸ್ಸು ಸಾಧಿಸಬೇಕೆಂಬ ಅಭಿಲಾಷೆ ಹೊಂದಲು ಸಾಧ್ಯ ಎಂದು ತಿಳಿಸಿದರು
ಕೊಳ್ಳೇಗಾಲ ಕ್ಷೇತ್ರದ ಶಾಸಕರಾದಂತಹ ಎ ಆರ್ ಕೃಷ್ಣಮೂರ್ತಿಯವರು ಸಹ ಕ್ರೀಡಾಭಿಮಾನಿಯಾಗಿದ್ದಾರೆ ಅವರು ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂದು ಹೇಳಿದ ಅವರು ಈ ಕ್ರೀಡೆಯಲ್ಲಿ ಪಾಲ್ಗೊಂಡು ತಾಲೂಕಿಗೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕೀರ್ತಿ ತರಬೇಕೆಂದು ಕ್ರೀಡಾಸ್ಪರ್ಧಿಗಳಿಗೆ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಹದೇವ ಕುಮಾರ್ ಹಾಗೂ ಕೊಳ್ಳೇಗಾಲ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜೋಸೆಫ್ ಅಲೆಕ್ಸಾಂಡರ್ ಹಾಗೂ ಪಾಳ್ಯ ಗ್ರಾಮಾಂತರ ಪ್ರೌಢಶಾಲೆ ಕಾರ್ಯದರ್ಶಿಗಳಾದ ಪ್ರವೀಣ್ ದೈಹಿಕ ಶಿಕ್ಷಕರಾದ ಪೀಟರ್, ಸುರೇಶ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.