ಕೊಳ್ಳೇಗಾಲ : ಕೊಳ್ಳೇಗಾಲ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಸುಸಜ್ಜಿತ ವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯ ಕಟ್ಟಡ ಕಾಮಗಾರಿ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಯವರು ಆಸ್ಪತ್ರೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಇಂದು ಆಗಮಿಸಿ ಕಾಮಗಾರಿ ಆರಂಭಕ್ಕೆ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಳ್ಳೇಗಾಲದಲ್ಲಿ ಜಿಲ್ಲಾ ಮಟ್ಟದ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದರು.
ನಂತರ ಕಳೆದ ವಾರ ಈಗಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೊಳ್ಳೇಗಾಲಕ್ಕೆ ಆಗಮಿಸಿ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೂ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಮತ್ತು ಶಂಕನಪುರ ಗ್ರಾಮಗಳ ನಡುವೆ ನಿರ್ಮಾಣಗೊಳ್ಳುತ್ತಿರುವ ಆಸ್ಪತ್ರೆಯು , ಈಗಾಗಲೇ ಯಳಂದೂರಿನಲ್ಲಿ ಸುಶ್ಚಿತವಾಗಿ ನಿರ್ಮಾಣವಾಗಿರುವ ಸ್ಪೆಷಲಿಟಿ ಆಸ್ಪತ್ರೆ ಮಾದರಿಯಲ್ಲಿ ಕೊಳ್ಳೇಗಾಲದಲ್ಲೂ ಸಹ ಗುಣಮಟ್ಟದ ಕಟ್ಟಡ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದವರು ಯಳಂದೂರು ಆಸ್ಪತ್ರೆ ಟೆಂಡರ್ ತೆಗೆದುಕೊಂಡವರೇ ಕೊಳ್ಳೇಗಾಲ ಆಸ್ಪತ್ರೆಗೂ ಸಹ ಟೆಂಡರ್ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಅನುಮೋದನೆಗೊಂಡ ಆಸ್ಪತ್ರೆಗೆ ಈಗಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಆದಷ್ಟು ಬೇಗನೆ ಜಿಲ್ಲಾಸ್ಪತ್ರೆ ಕಾಮಗಾರಿ ಮುಗಿದು ಈ ಭಾಗದ ಜನರಿಗೆ ಉತ್ತಮ ಆರೋಗ್ಯಕರ ಸೇವೆ ಸಿಗಲಿ ಎಂದು ಆಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ರಾಜೇಶ್ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿ ಅಧ್ಯಕ್ಷ ಚಂದ್ರು ತಾಲೂಕು ಸಮಿತಿ ಅಧ್ಯಕ್ಷ ರಾಜೇಂದ್ರ ಸೇರಿದಂತೆ ಗುತ್ತಿಗೆದಾರರು ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದರು
ವರದಿ ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.