ಕೊಳ್ಳೇಗಾಲ: ಮುಂಬರುವ ಸ್ಥಳೀಯ ಚುನಾವಣೆ ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಹುತೇಕ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಈಗಿನಿಂದಲೇ ಚುನಾವಣೆಗೆ ತಯಾರಾಗಿ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಬಿ.ಪುಟ್ಟಸ್ವಾಮಿಯವರು ಜೆಡಿಎಸ್ ಮುಖಂಡರುಗಳಿಗೆ ಕರೆ ನೀಡಿದರು.
ಅವರು ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ದೇವಸ್ಥಾನದ ಅನುಭವ ಮಂಟಪದಲ್ಲಿ ಜೆಡಿಎಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಮೀಸಲಾತಿ ಪ್ರಕಟವಾಗಿದ್ದು ರಾಜ್ಯದಲ್ಲಿ ಎಲ್ಲಾ ಪ್ರಮುಖ ಪಕ್ಷಗಳ ಚುನಾವಣಾಗೆ ತಯಾರಾಗುತ್ತಿದ್ದು ಅಂತೆಯೇ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಚುನಾವಣೆಗೆ ಕ್ಷೇತ್ರದ ಜೆಡಿಎಸ್ ಮುಖಂಡರು ಗೆಲ್ಲುವ ಸೂಕ್ತ ಅಭ್ಯರ್ಥಿಗಳಿಗೆ ಸೂಚಿಸಿದರೆ ಅವರಿಗೆ ಟಿಕೆಟ್ ನೀಡಲಾಗುವುದು ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು ಮುಂಬರುವ ಸ್ಥಳೀಯ ಚುನಾವಣೆಗಳಿಗೆ ಎರಡು ಪಕ್ಷಗಳ ಪ್ರಮುಖರು ಟಿಕೆಟ್ ಹಂಚಿಕೆ ವಿಚಾರದಲ್ಲಿ ಪರಸ್ಪರ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರುವ ಮುನ್ಸೂಚನೆ ಇದ್ದು ಇದರ ಬಗ್ಗೆ ಯಾವುದೇ ಗೊಂದಲಕ್ಕೊಳಗಾಗದೆ ಜೆಡಿಎಸ್ ಪಕ್ಷ ಸಂಘಟನೆ ಒತ್ತುಕೊಟ್ಟು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಇಂದಿನ ಸಭೆಯಲ್ಲಿ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಯಳಂದೂರು ತಾಲ್ಲೂಕು ಘಟಕದ ಅಧ್ಯಕ್ಷ ಆನಂದ್, ಕೊಳ್ಳೇಗಾಲ ಟೌನ್ ಜೆಡಿಎಸ್ ಅಧ್ಯಕ್ಷ ಎನ್.ಸುರೇಶ್, ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಂದ್ರಪ್ಪ, ಕೊಳ್ಳೇಗಾಲ ತಾಲ್ಲೂಕು ಹಾಗೂ ಯಳಂದೂರು ಗ್ರಾಮಪಂಚಾಯಿತಿ ಸದಸ್ಯರುಗಳು ಹಾಗೂ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು.
ನಿಂಪು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.