ಕೊಳ್ಳೇಗಾಲ- ಕೊಳ್ಳೇಗಾಲ ತಾಲೂಕು ಸಮಗ್ರ ಗ್ರಾಮೀಣಾಭಿವೃದ್ಧಿ ವಿಧೋದ್ದೇಶ ಸಹಕಾರ ಸಂಘ ನಿಯಮಿತ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 23ರಂದು ಕೊಳ್ಳೇಗಾಲ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾಂಗಣದಲ್ಲಿ ಬೆಳಗ್ಗೆ 10-30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಸಂಘದ ಅಧ್ಯಕ್ಷರಾದ ಎಸ್ ಶಾಂತರಾಜು ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಮಹಾಸಭೆ ನಡೆಯಲಿದೆ

ಸಭೆಯಲ್ಲಿ ಹಿಂದಿನ ವಾರ್ಷಿಕ ಮಹಾಸಭೆಯ ನಡಾವಳಿಗಳನ್ನು ಓದಿ ರೆಕಾರ್ಡ್ ಮಾಡಲಾಗುವುದು
2025 26 ನೇ ಸಾಲಿನ ಆಡಿಟ್ ಜಮಾ ಖರ್ಚು, ಲಾಭ ನಷ್ಟ ತಖ್ತೆಗಳನ್ನು ಪರಿಶೀಲಿಸಿ ಅಂಗೀಕರಿಸಲಾಗುವುದು

2026 2027 ನೇ ಸಾಲಿಗೆ ಲೆಕ್ಕ ಪರಿಶೋಧಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗುವುದು

ಹಾಗೂ 2026 27 ನೇ ಸಾಲಿನ ಅಂದಾಜು ಬಜೆಟ್ ಮಂಜೂರು ಮಾಡಲಾಗುವುದು 

ಅಧ್ಯಕ್ಷರ ಅಪ್ಪಣೆಯ ಮೇರೆಗೆ ಇನ್ನಿತರ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಆದ್ದರಿಂದ ಕೊಳ್ಳೇಗಾಲ ತಾಲೂಕು ಸಮಗ್ರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘದ ಎಲ್ಲಾ ಸರ್ವ ಸದಸ್ಯರು ಈ ಮಹಾಸಭೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗಾನಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.