ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದಿಂದ ಬೌದ್ಧ ಸಮ್ಮೇಳನಕ್ಕೆ ಕಾಣಿಕೆ

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ ತಿಂಗಳ 24 ಮತ್ತು 25ರಂದು ನಡೆಯಲಿರುವ ಎರಡನೇ ವಿಶ್ವ ಬೌದ್ಧ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿ, ಕೊಳ್ಳೇಗಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ 5000 ದೇಣಿಗೆಯನ್ನು ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿಯವರಿಗೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ ಅಧ್ಯಕ್ಷರಾದ ನಿಂಪುರಾಜೇಶ್  ಮೂಲಕ ನೀಡಲಾಯಿತು
ಈ ವೇಳೆ ನಿಂಪು ರಾಜೇಶ್ ಅವರು ಮಾತನಾಡಿ ಬುದ್ಧ ಎಂದರೆ ಬೆಳಕು, ಬೆಳಕು ಎಂದರೆ ಬುದ್ಧ ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ಎರಡನೇ ವಿಶ್ವ ಬೌದ್ಧ ಸಮ್ಮೇಳನ ನಡೆಯುತ್ತಿರುವುದು ಈ ಕಾರ್ಯಕ್ರಮದ ಯಶಸ್ವಿಗಾಗಿ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿಯವರು ಹಗಲು ರಾತ್ರಿ ಶ್ರಮ ವಹಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳಿದ ಅವರು 
ಈ ಕಾರ್ಯಕ್ರಮ ಯಶಸ್ವಿಯಾಗಲೆಂದು ಶುಭ ಹಾರೈಸಿದರು 
ಪತ್ರಕರ್ತರಿಗೆ ಸಾಮಾಜಿಕ ಕಳಕಳಿ ಸಾಮಾಜಿಕ ಬದ್ಧತೆ ಹಾಗೂ ಸಮಾಜದ ಆಗು ಹೋಗುಗಳ ಬಗ್ಗೆ ನಿಗಾ ಇರುತ್ತದೆ 
ಪ್ರತಿ ಪತ್ರಕರ್ತನು ಸಹ ಸಮಾಜದ ಜೊತೆ ತನ್ನನ್ನು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುವ ಮೂಲಕ ಇಂಥ ಕಾರ್ಯಕ್ರಮಗಳು ಯಶಸ್ವಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು 
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು  ಯಳಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಪ್ರಭು ಪ್ರಸಾದ್ ವಕೀಲರಾದ ಗೌಡಹಳ್ಳಿ ಮಹೇಶ್ ಹಾಗೂ ಕೊಳ್ಳೇಗಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಟರಾಜ್ ಕಾರ್ಯದರ್ಶಿ ರಾಜೇಶ್ ಸೂರಪುರ ಖಜಾಂಜಿ ಮಣಿಕಂಠನ್ ಹಾಗೂ ನಿರ್ದೇಶಕರಾದ ಸಾಗರ್ ನಿಂಪು, ಚಿನ್ನಸ್ವಾಮಿ ಮತ್ತಿತರರು ಇದ್ದರು
ವರದಿ ನಿಂಪು ರಾಜೇಶ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.