/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲದಲ್ಲಿ ಪೋಷಕರ ಶಿಕ್ಷಕರ ಮಹಾಸಭೆ ಕಾರ್ಯಕ್ರಮ
Image

ಕೊಳ್ಳೇಗಾಲದಲ್ಲಿ ಪೋಷಕರ ಶಿಕ್ಷಕರ ಮಹಾಸಭೆ ಕಾರ್ಯಕ್ರಮ

ಕೊಳ್ಳೇಗಾಲ. ಪಟ್ಟಣದ ಸರ್ಕಾರಿ ಎಸ್.ವಿ.ಕೆ ಬಾಲಿಕಾ ಪದವಿ ಪೂರ್ವ ಕಾಲೇಜುನಲ್ಲಿ ಶುಕ್ರವಾರ ಪೋಷಕರ-ಶಿಕ್ಷಕರ ಮಹಾಸಭೆ-2025 ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ, ಚಾ.ನಗರ ಜಿ.ಪಂ ವತಿಯಿಂದ ನಡೆದ ಕಾರ್ಯಕ್ರಮವನ್ನು ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ ಅವರು ಉದ್ಘಾಟನೆ ಮಾಡಿ ಬಳಿಕ ಮಾತನಾಡಿ, ಒಂದು ಮಗುವಿನ ಉತ್ತಮ ಬೆಳವಣಿಗೆಗೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ.
ಶ್ರಧ್ದೆಯಿಂದ ಉನ್ನತ ಶಿಕ್ಷಣ ಪಡೆದಾಗ ಮಾತ್ರ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇರುವುದು ಶಿಕ್ಷಣದಿಂದ ಮಾತ್ರ ಸಾಧ್ಯ.
ಆದ್ದರಿಂದ ವಿದ್ಯಾರ್ಥಿಗಳು ಉನ್ನತ್ತ ಶಿಕ್ಷಣ ಪಡೆಯುವ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿ, ತಾ.ಪಂ ವತಿಯಿಂದ 150 ಚೇರ್ ಗಳನ್ನು ಮುಂದಿನ ತಿಂಗಳು ಕೊಡಿಸುವ ಭರವಸೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಅಂಗವಿಕಲ ವಿದ್ಯಾರ್ಥಿಗಳಿಗಾಗಿ ಶೌಚಾಲಯ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದರು.
ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಹಾಗೂ ಹೆಚ್ಚಿನ ಹಾಜರಾತಿ ಪಡೆದಿರುವ ಮಕ್ಕಳಿಗೆ ಸನ್ಮಾನಿಸಿ ಬಹುಮಾನ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಬಿಇಒ ಮಂಜುಳಾ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಹರ್ಷ, ಪ್ರಾಂಶುಪಾಲರು ಡಾ.ಮಂಗಳಮೂರ್ತಿ, ಉಪಪ್ರಾಂಶುಪಾಲರು ವಿಶ್ವನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಜೋಸೆಫ್ ಅಲೆಕ್ಸಾಂಡರ್, ಡಯಟ್ ಉಪನ್ಯಾಸಕರು ಕಾತ್ಯಾಯಿನಿ, ಪ್ರೌಢಶಾಲಾ ವಿಭಾಗ ಎಸ್.ಡಿ.ಎಂ.ಸಿ ಅಧ್ಯಕ್ಷರು ಪವಿತ್ರ ಹಾಗೂ ಇತರರು ಇದ್ದರು.

ವರದಿ ; ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top