

ಕೊಳ್ಳೇಗಾಲ. ತಾಲ್ಲೂಕು ಬಲಗೈ ಸಮುದಾಯಗಳ ಒಕ್ಕೂಟ ವತಿಯಿಂದ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗುರುವಾರ ಹಮ್ಮಿಕೊಂಡಿದ್ದರು.
ಪಟ್ಟಣದ ಎಂ.ಜಿ.ಎಸ್.ವಿ ಮೈದಾನದಲ್ಲಿ ಜಮಾಯಿಸಿದ್ದ ಹೋರಾಟಗಾರರು ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಬಸ್ ನಿಲ್ದಾಣದ ರಸ್ತೆ, ಡಾ.ವಿಷ್ಣು ರಸ್ತೆ, ಡಾ.ರಾಜ್ ರಸ್ತೆ, ಡಾ.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನೆ ನಡೆಸಿದರು. ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹೆಚ್.ಸಿ ಮಹದೇವಪ್ಪ, ಪರಮೇಶ್ವರ್ ಹಾಗೂ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಪೋಟೋಗಳಿಗೆ ಚಪ್ಪಲಿಯಲ್ಲಿ ಹೊಡೆಯುವ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಪ್ರತಿಭಟನಾಕಾರರು ಮಾತನಾಡಿ, ದೇಶದ ಬಹುಸಂಖ್ಯಾತ ಪರಿಶಿಷ್ಟ ಜಾತಿಯ ಬಲಗೈ ಸಂಬಂಧಿತ ಜಾತಿಗಳು ಶತಮಾನಗಳಿಂದ ಶಿಕ್ಷಣ, ಉದ್ಯೋಗ ಮತ್ತು ಅಧಿಕಾರಗಳಿಂದ ವಂಚಿತರಾಗಿದ್ದವು. ಬಿ.ಆರ್. ಅಂಬೇಡ್ಕರ್ ಅವರ ನಿರಂತರ ಹೋರಾಟದ ಫಲವಾಗಿ ದೊರೆತ ಮೀಸಲಾತಿಯಿಂದ ಈಗಷ್ಟೇ ಒಂದು-ಎರಡು ತಲೆಮಾರುಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೀಮಿತ ಪ್ರಗತಿ ಸಾಧ್ಯವಾಗಿದೆ ಎಂದು ತಿಳಿಸಿದರು.
ಆದರೆ, ಜಾತಿವಾದ ಮತ್ತು ಕೋಮುವಾದ ಮನೋಭಾವದವರು ಒಳಮೀಸಲಾತಿಯ ಹೆಸರಿನಲ್ಲಿ ಬಲಗೈ ಸಂಬಂಧಿತ ಜಾತಿಗಳನ್ನು ಮೀಸಲಾತಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ರಾಜ್ಯವನ್ನು ಆಡಳಿತ ನಡೆಸಿದ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಇಂದಿನ ಪರಿಸ್ಥಿತಿಗೆ ಕಾರಣವಾಗಿವೆ ಎಂದು ವಾಗ್ದಾಳಿ ನಡೆಸಿದರು.
ಹಲವಾರು ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಲುಪಿಸುವಂತೆ ಉಪವಿಭಾಗ ಅಧಿಕಾರಿ ದಿನೇಶ್ ಕುಮಾರ್ ಮೀನಾ ರವರಿಗೆ ಮನವಿ ಪತ್ರ ನೀಡಿದರು.
ಈ ಸಂಧರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪುಟ್ಟಸ್ವಾಮಿ, ಹೆಚ್.ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಸಹಕಾರ್ಯದರ್ಶಿ ಶಶಿಧರ್, ಖಜಾಂಚಿ ರಾಜೇಶ್, ಮುಖಂಡರು ಅಣಗಳ್ಳಿ ಬಸವರಾಜು, ಕೂಡ್ಲೂರು ಶ್ರೀಧರ್ ಮೂರ್ತಿ, ನಟರಾಜು ಮಾಳಿಗೆ, ಶೇಖರ್ ಬುದ್ಧ, ಸಿದ್ದಪ್ಪಾಜಿ, ಶಂಕರ್ ಚೇತನ್, ದಿಲೀಪ್ ಸಿದ್ದಪ್ಪಾಜಿ, ಮುಳ್ಳೂರು ಕಮಲ್, ವಕೀಲರ ಸಂಘದ ಅಧ್ಯಕ್ಷರು ಬಸವರಾಜು, ಮುಳ್ಳೂರು ಶಿವಮಲ್ಲು, ಚೇತನ್ ದೊರೆ, ವರದರಾಜು, ಗುರುಮೂರ್ತಿ, ಮಹಿಳಾ ಸಂಘಟನೆಯ ಶಿವಮ್ಮ, ಸಿದ್ದಯ್ಯನಪುರ ಗ್ರಾ.ಪಂ ಮಾಜಿ ಅಧ್ಯಕ್ಷರು ಶಶಿಕುಮಾರಿ, ಕನ್ನಡ ಸಂರಕ್ಷಣಾ ಪಡೆ ಜಿಲ್ಲಾಧ್ಯಕ್ಷ ಮಾಂಬಳ್ಳಿ ರಾಜೇಶ್ ಮಹಾಜನ್, ಜಗದೀಶ್ ಶಂಕನಪುರ, ಮಹದೇವ ಶಂಕನಪುರ, ತಾಲ್ಲೂಕಿನ ಮಾಜಿ ಜನಪ್ರತಿನಿಧಿಗಳು ಹಾಗೂ ಇತರರು ಇದ್ದರು.
ವರದಿ- ನಿಂಪು ಸುರೇಶ್
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)













