
ಹನೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಹನೂರು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಏಕಗವಾಕ್ಷಿ ಕೇಂದ್ರ ಕಾರ್ಯಾರಂಭದ ಅಂಗವಾಗಿ ತಹಶೀಲ್ದಾರ್ ಚೈತ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನೆಡೆಯಿತು
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಚೈತ್ರ
ಗೌರಿ-ಗಣೇಶ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಪೂರ್ಣವಾಗಿ ಆಚರಿಸಲು ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಸಹಕಾರದೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಉದ್ದೇಶಕ್ಕಾಗಿ ಏಕಗವಾಕ್ಷಿ ಕೇಂದ್ರ ತೆರೆಯಲಾಗಿದೆ. ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ನಿರಂತರ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ ಗಣೇಶ ವಿಸರ್ಜನೆಯು
ಏಳು ದಿನಗಳ ಒಳಗೆ ಪೂರ್ಣಗೊಳ್ಳಬೇಕು. ಎಲ್ಲರೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಎಂದು ಹೇಳಿದರು.
ಅಲ್ಲದೆ, ಸಾರ್ವಜನಿಕರು ಗಣಪತಿ ಪ್ರತಿಷ್ಠಾಪನೆ ಮಾಡುವಾಗ ಕಡ್ಡಾಯವಾಗಿ ಇಲಾಖೆಗಳಿಂದ ನಿಗದಿತ ನಿಯಮಗಳನ್ನು ಪಾಲಿಸಬೇಕೆಂದು ಕೋರಿದರು
ಈ ಸಂದರ್ಭದಲ್ಲಿ ಠಾಣೆಯ ಪೊಲೀಸ್ ಠಾಣೆಯ ಶಿವರಾಜ್ ಮಾದಪ್ಪ,ಗುರುಸ್ವಾಮಿ,ಮೂರ್ತಿ ಪಪಂ ಅಧಿಕಾರಿ ಪ್ರಕಾಶ್ ತಾಪಂ ಅಧಿಕಾರಿ ರಮೇಶ್ ಆಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ಮಹೇಶ್‌ಕಂದಾಯ ಇಲಾಖೆಯ ಅಧಿಕಾರಿ ಲೊಕೇಶ್ ಹಾಜರಿದ್ದರು