


ಹನೂರು – ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 19 ವರ್ಷಗಳಿಂದ ಸೇವೆ ಸಲ್ಲಿಸಿ, ಇದೀಗ ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ವರ್ಗಾವಣೆ ಆಗಿರುವ ಡಾಕ್ಟರ್ ಟಿ.ರಾಜು ಅವರಿಗೆ ಮಾರ್ಟಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಹೃದಯಸ್ಪರ್ಶಿ ಸನ್ಮಾನ ಮಾಡಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಇಗ್ನೇಷಿ ಮುತ್ತು ಹಾಗೂ ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಲಿ ಸದಸ್ಯ ರಾಮಲಿಂಗಂ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಡಾಕ್ಟರ್ ರಾಜು ಅವರು ಕಳೆದ 19 ವರ್ಷಗಳಿಂದ ಮಾರ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಸುತ್ತಮುತ್ತಲಿನ ಕಾಡಂಚಿನ ಜನರಿಗೆ ಉತ್ತಮ ಸೇವೆ ಸಲ್ಲಿಸಿ ಜನಪ್ರಿಯ ಆಗಿದ್ದಾರೆ.
ಇದೀಗ ರಾಜು ಅವರಿಗೆ ಮಾರ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹನೂರು ಪಟ್ಟಣದ ತಾಲ್ಲೂಕು ಕೇಂದ್ರ ಆಸ್ಪತ್ರೆಗೆ ವರ್ಗಾವಣೆ ಆಗಿದೆ.
ಈ ಹಿನ್ನೆಲೆಯಲ್ಲಿ ಮಾರ್ಟಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಹೃದಯಸ್ಪರ್ಶಿ ಸನ್ಮಾನ ಮಾಡಿ ಭೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಸುರೇಶ್, ಆರ ಸ್ವಾಮಿ, ಪೌಲ್ ರಾಜ್, ಅಂತೋಣಿಯಮ್ಮ, ಬಾಲಯ್ಯ, ಮಾಜಿ ಸದಸ್ಯರಾದ ಜಪಮಾಲೆ, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ಮಣಿ ಇನ್ನಿತರರು ಇದ್ದರು.
ವರದಿ: ನಿಂಪು ರಾಜೇಶ್